ಕೊಪ್ಪಳ, 05 ಜುಲೈ (ಹಿ.ಸ.) :
ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಜುಲೈ 6 ಮತ್ತು 7 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಚಿವರು ಜು. 6ರಂದು ಕೊಪ್ಪಳ ಜಿಲ್ಲೆಯ ಕಾರಟಗಿಯ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಹಾಗೂ ಕನಕಗಿರಿ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರ ಭೇಟಿ ಮತ್ತು ಕುಂದುಕೊರತೆಗಳ ವಿಚಾರಣೆ ಮಾಡುವರು. ನಂತರ ಅಂದು ಕಾರಟಗಿಯಲ್ಲಿ ವಾಸ್ತವ್ಯ ಮಾಡುವರು. ಜು. 7ರಂದು ಬೆಳಿಗ್ಗೆ 10 ಗಂಟೆಗೆ ಕಾರಟಗಿಯಿಂದ ನಿರ್ಗಮಿಸಿ, 11.30ಕ್ಕೆ ಕೊಪ್ಪಳಕ್ಕೆ ಆಗಮಿಸಿ, ಮುಖ್ಯಮಂತ್ರಿಗಳು ಕೊಪ್ಪಳ ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿರುವ ಕಾರಣ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆಯುವ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳುವರು.
ಮಧ್ಯಾಹ್ನ 3.30ಕ್ಕೆ ಕೊಪ್ಪಳದಿಂದ ನಿರ್ಗಮಿಸಿ, ಸಂಜೆ 5 ಗಂಟೆಗೆ ಕಾರಟಗಿಗೆ ಆಗಮಿಸಿ, ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಹಾಗೂ ಕನಕಗಿರಿ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರ ಭೇಟಿ ಮತ್ತು ಕುಂದುಕೊರತೆಗಳ ವಿಚಾರಣೆ ನಡೆಸಿ, ಅಂದು ಕಾರಟಗಿಯಲ್ಲಿ ವಾಸ್ತವ್ಯ ಮಾಡುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್