ರಾಮೇಶ್ವರ ದೇವಸ್ಥಾನ ವೀಕ್ಷಿಸಿದ ಸಚಿವ ಎಚ್.ಕೆ.ಪಾಟೀಲ
ಗದಗ, 05 ಜುಲೈ (ಹಿ.ಸ.) : ಆ್ಯಂಕರ್ : ಗದಗ ನಗರದ ಸೋಮೇಶ್ವರ ರಸ್ತೆಯಲ್ಲಿರುವ ಐತಿಹಾಸಿಕ ರಾಮೇಶ್ವರ ದೇವಸ್ಥಾನಕ್ಕೆ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ ಅವರು ಭೇಟಿ ನೀಡಿ ವೀಕ್
ಪೋಟೋ


ಗದಗ, 05 ಜುಲೈ (ಹಿ.ಸ.) :

ಆ್ಯಂಕರ್ : ಗದಗ ನಗರದ ಸೋಮೇಶ್ವರ ರಸ್ತೆಯಲ್ಲಿರುವ ಐತಿಹಾಸಿಕ ರಾಮೇಶ್ವರ ದೇವಸ್ಥಾನಕ್ಕೆ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ ಅವರು ಭೇಟಿ ನೀಡಿ ವೀಕ್ಷಿಸಿದರು.

ಗದಗ ನಗರ ಸೇರಿದಂತೆ ಜಿಲ್ಲೆಯಲ್ಲಿ ಅನೇಕ ಐತಿಹಾಸಿಕ ಇತಿಹಾಸ ಸಾರುವ ಮಹತ್ವದ ದೇವಸ್ಥಾನಗಳೀವೆ.ಅವುಗಳ ಜೀರ್ಣೋದ್ಧಾರ ಮಾಡುವ ಮೂಲಕ ಯುವಪೀಳಿಗೆಗೆ ಇತಿಹಾಸದ ಪರಿಚಯ ಮಾಡಿಸಬೇಕಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ರಾಮೇಶ್ವರ ದೇವಸ್ಥಾನದ ಇತಿಹಾಸ ಸೇರಿದಂತೆ ಎಲ್ಲ ವಿಷಯಗಳ ಕುರಿತು ತಿಳಿಸಿ ಕೊಡುವ ಪ್ರಯತ್ನಗಳಾಗಬೇಕಿದೆ. ಸರ್ಕಾರದಿಂದ ಜೀರ್ಣೋದ್ದಾರ ಕೈಗೊಳ್ಳುವ ಮೂಲಕ ಮೂಲ ದೇವಸ್ಥಾನದ ಆಕೃತಿಗೆ ತೊಂದರೆಯಾಗದಂತೆ ಮಾಡಲು ಪ್ರಯತ್ನ ಸಾಗಿದೆ. ದೇವಸ್ಥಾನ ಪ್ರದೇಶದ ಸಾರ್ವಜನಿಕರು ಸೂಕ್ತ ಸಹಕಾರ ನೀಡಬೇಕು ಎಂದು ಸಚಿವ ಎಚ್.ಕೆ.ಪಾಟೀಲ ಅವರು ಹೇಳಿದರು.

ಈ ಸಂದರ್ಭದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲೂಕಾಧ್ಯಕ್ಷ ಅಶೋಕ ಮಂದಾಲಿ, ಪ್ರಭು ಬುರಬುರೆ, ಸಿದ್ದು ಪಾಟೀಲ, ಎಸ್.ಎನ್.ಬಳ್ಳಾರಿ, ರವಿ ಮೂಲಿಮನಿ, ಫಾರೂಕ್ ಹುಬ್ಬಳ್ಳಿ, ಅ.ದ.ಕಟ್ಟಿಮನಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande