ಧಾರವಾಡ, 05 ಜುಲೈ (ಹಿ.ಸ.) :
ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಂಗನವಾಡಿ ಶಿಕ್ಷಕಿಯರು, ಸಹಾಯಕಿಯರು ಹಾಗೂ ಶಿಶು ಅಭಿವೃದ್ಧಿ ಅಧಿಕಾರಿಗಳಿಗೆ ಫಲಪ್ರದ ತರಬೇತಿ ನೀಡಬೇಕು ಎಂದು ಧಾರವಾಡ ಜಿಲ್ಲಾ ಪಂಚಾಯತ್ ಸಿಇಒ ಭುವನೇಶ್ ಪಾಟೀಲ ಸೂಚಿಸಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ಪೋಷಣ ಅಭಿಯಾನದಡಿ ಆಹಾರದ ಸರಿಯಾದ ವಿತರಣೆಗೆ ನಿಗಾ ವಹಿಸಬೇಕು, ಬಡ ಮಕ್ಕಳ ಹಕ್ಕುಗಳನ್ನು ಸಂರಕ್ಷಿಸುವಲ್ಲಿ ನಿರ್ಲಕ್ಷ್ಯ ನಡೆಯಬಾರದು ಎಂದು ಹೇಳಿದರು.
ಅಂಗನವಾಡಿ ಆಹಾರ ಸೋರಿಕೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಇಲಾಖೆಗಳ ಅಧಿಕಾರಿಗಳು ಹಾಗೂ ಪ್ರತಿಷ್ಠಿತ ಫೌಂಡೇಶನ್‌ಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa