ಸಂಭಾಲ್ ಅಪಘಾತ : ಪ್ರಧಾನಿ ಮೋದಿ ಸಂತಾಪ
ನವದೆಹಲಿ, 05 ಜುಲೈ (ಹಿ.ಸ.) : ಆ್ಯಂಕರ್ : ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಜುನವೈ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ವರ ಸೇರಿದಂತೆ 8 ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರ
ಸಂಭಾಲ್ ಅಪಘಾತ : ಪ್ರಧಾನಿ ಮೋದಿ ಸಂತಾಪ


ನವದೆಹಲಿ, 05 ಜುಲೈ (ಹಿ.ಸ.) :

ಆ್ಯಂಕರ್ : ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಜುನವೈ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ವರ ಸೇರಿದಂತೆ 8 ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಮತ್ತು ಗಾಯಾಳುಗಳಿಗೆ ₹50,000 ಪರಿಹಾರ ನೀಡುವುದಾಗಿ ಪ್ರಧಾನಿ ಕಚೇರಿ ಪ್ರಕಟಣೆ ತಿಳಿಸಿದೆ.

ಹರ್ಗೋವಿಂದ್‌ಪುರ ನಿವಾಸಿ ಸೂರಜ್ (24) ಅವರ ಮದುವೆ ಮೆರವಣಿಗೆಯ ವೇಳೆ ಅವರ ಕಾರು ವೇಗದ ನಿಯಂತ್ರಣ ತಪ್ಪಿ ಜಂತ ಇಂಟರ್ ಕಾಲೇಜಿನ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿ ಇದ್ದ ಮಕ್ಕಳೂ ಸೇರಿ ಹಲವು ಮಂದಿ ಮೃತರಾದರು ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande