ಬೆಂಗಳೂರು, 06 ಜುಲೈ (ಹಿ.ಸ.) :
ಆ್ಯಂಕರ್ : ಎಐಸಿಸಿಯ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಮಕಗೊಂಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಕುರಿತು ಮುಖ್ಯಮಂತ್ರಿ ಕಚೇರಿಯಿಂದ ಸ್ಪಷ್ಟಿಕರಣ ಪ್ರಕಟಣೆ ಬಿಡುಗಡೆ ಮಾಡಲಾಗಿದ್ದು, ಅಂತಹ ಯಾವುದೇ ನೇಮಕಾತಿಯೂ ಆಗಿಲ್ಲ. ಒಬಿಸಿ ಸಲಹಾ ಮಂಡಳಿಯ ಸದಸ್ಯರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಒಬ್ಬರಾಗಿದ್ದಾರೆ.
ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಡಾ. ಅನಿಲ್ ಜೈಹಿಂದ್ ಅವರ ಅಧ್ಯಕ್ಷತೆಯಲ್ಲಿ ಜುಲೈ 15ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಸಭೆಯ ಆತಿಥ್ಯವನ್ನು ಮುಖ್ಯಮಂತ್ರಿಗಳು ವಹಿಸಿಕೊಂಡಿದ್ದಾರೆ. ಸಭೆ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆಯಲಿದೆ. ರಾಜ್ಯಗಳ ಪಕ್ಷದ ಮಾಜಿ ಮುಖ್ಯಮಂತ್ರಿಗಳು, ಹಾಲಿ ಮತ್ತು ಮಾಜಿ ಸಂಸದರು, ಶಾಸಕರು ಸೇರಿದಂತೆ 50 ಮಂದಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa