ಬೀದಿ ನಾಟಕ-ಜಾನಪದ ಸಂಗೀತ ಕಲಾ ತಂಡಗಳಿಂದ ಅರ್ಜಿ ಆಹ್ವಾನ
ವಿಜಯಪುರ, 06 ಜುಲೈ (ಹಿ.ಸ.) : ಆ್ಯಂಕರ್ : ವಿಜಯಪುರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಸರ್ಕಾರಿ ಕಾರ್ಯಕ್ರಮಗಳ ಕುರಿತ ಬೀದಿನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಬೀದಿ ನಾಟಕ, ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಲು
ಬೀದಿ ನಾಟಕ-ಜಾನಪದ ಸಂಗೀತ ಕಲಾ ತಂಡಗಳಿಂದ ಅರ್ಜಿ ಆಹ್ವಾನ


ವಿಜಯಪುರ, 06 ಜುಲೈ (ಹಿ.ಸ.) :

ಆ್ಯಂಕರ್ : ವಿಜಯಪುರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಸರ್ಕಾರಿ ಕಾರ್ಯಕ್ರಮಗಳ ಕುರಿತ ಬೀದಿನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಬೀದಿ ನಾಟಕ, ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯಿಂದ 03 ಬೀದಿ ನಾಟಕ ಹಾಗೂ 03 ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಲಾಗುತ್ತದೆ. ಪ್ರತಿ ಬೀದಿ ನಾಟಕ ತಂಡದಲ್ಲಿ 08 ಜನ ಕಲಾವಿದರಿರಬೇಕು. ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರಿರಬೇಕು.

ಪ್ರತಿ ಜಾನಪದ ಸಂಗೀತ ಕಲಾ ತಂಡದಲ್ಲಿ 03ಜನ ಕಲಾವಿದರಿರಬೇಕು. ಇದರಲ್ಲಿ ಕಡ್ಡಾಯವಾಗಿ ಒಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರಿರಬೇಕು.

ಕಲಾ ತಂಡಕ್ಕೆ ಆಯ್ಕೆ ಮಾಡಲು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೃಷಿ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳನ್ನೊಳಗೊಂಡ ಸಮಿತಿಯನ್ನು ರಚಿಸಿ ಆಯ್ಕೆ ಮಾಡಲಾಗುವುದು.

ಆಸಕ್ತ ಅರ್ಹ ಕಲಾ ತಂಡಗಳು ನಿಗದಿತ ಅರ್ಜಿ ನಮೂನೆಯನ್ನು ನಗರದ ಸ್ಟೇಶನ್ ರಸ್ತೆಯ ಕಂದಗಲ್ ಹನುಮಂತರಾಯ ರಂಗಮಂದಿರದ ಆವರಣದಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಕಚೇರಿ ವೇಳೆಯಲ್ಲಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ದಿನಾಂಕ :29-07-2025ರೊಳಗೆ ಸಲ್ಲಿಸಬೇಕು. ಸಲ್ಲಿಸಬೇಕಾದ ದಾಖಲೆಗಳು ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊ: 8660068406 ಸಂಖ್ಯೆಗೆ ಸಂಪರ್ಕಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಅಮರೇಶ ದೊಡಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande