ಹುಬ್ಬಳ್ಳಿ, 06 ಜುಲೈ (ಹಿ.ಸ.) :
ಆ್ಯಂಕರ್ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಮಹಿಳೆ, ಕರ್ನಾಟಕದಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಎನ್ನುವುದೆಲ್ಲ ಸದ್ಯಕ್ಕೆ ಊಹಾಪೂಹದ ಮಾತು ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಸಾಂಸ್ಥಿಕ ಚುನಾವಣೆಗಳ ಮೂಲಕವೇ ಅಧ್ಯಕ್ಷರ ಆಯ್ಕೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.
ದೇಶಾದ್ಯಂತ ಬೂತ್ ಮಟ್ಟದಿಂದಲೂ ಅಧ್ಯಕ್ಷರುಗಳ ಆಯ್ಕೆಗೆ ಸಾಂಸ್ಥಿಕ ಚುನಾವಣೆ ನಡೆಸಲಾಗುತ್ತದೆ. ಬೂತ್ ಅಧ್ಯಕ್ಷರು, ಮಂಡಳ ಅಧ್ಯಕ್ಷರು, ಜಿಲ್ಲಾಧ್ಯಕ್ಷರು ಬಳಿಕ ರಾಜ್ಯಧ್ಯಕ್ಷರ ಚುನಾವಣೆ ಹಾಗೂ ಅಂತಿಮವಾಗಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ನಡೆಯುತ್ತದೆ. ಕರ್ನಾಟಕ ಮಾತ್ರವಲ್ಲ ಎಲ್ಲಾ ರಾಜ್ಯಗಳಲ್ಲೂ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ನೇಮಕ ನಡೆಯಲಿದೆ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa