ಬಳ್ಳಾರಿ : ಕೆಯುಡಬ್ಲ್ಯುಜೆಯಿಂದ ಪತ್ರಿಕಾ ದಿನಾಚರಣೆ
ಬಳ್ಳಾರಿ, 06 ಜುಲೈ (ಹಿ.ಸ.) : ಆ್ಯಂಕರ್ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಳ್ಳಾರಿ ಜಿಲ್ಲಾ ಅಡಾಕ್ ಕಮಿಟಿಯು ಸೋಮವಾರ ಬೆಳಿಗ್ಗೆ 10.30 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ (ಹಳೆಯ) ಕಚೇರಿ ಆವರಣದಲ್ಲಿ ಇರುವ ಗಾಂಧಿಭವನದಲ್ಲಿ 2025 ನೇ ಸಾಲಿನ ಪತ್ರಿಕಾ ದಿನಾಚರಣೆಯನ್ನು ಹಮ್ಮಿಕೊಂಡಿದೆ.
ಬಳ್ಳಾರಿ : ಕೆಯುಡಬ್ಲ್ಯುಜೆಯಿಂದ ಪತ್ರಿಕಾ ದಿನಾಚರಣೆ


ಬಳ್ಳಾರಿ : ಕೆಯುಡಬ್ಲ್ಯುಜೆಯಿಂದ ಪತ್ರಿಕಾ ದಿನಾಚರಣೆ


ಬಳ್ಳಾರಿ : ಕೆಯುಡಬ್ಲ್ಯುಜೆಯಿಂದ ಪತ್ರಿಕಾ ದಿನಾಚರಣೆ


ಬಳ್ಳಾರಿ, 06 ಜುಲೈ (ಹಿ.ಸ.) :

ಆ್ಯಂಕರ್ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಳ್ಳಾರಿ ಜಿಲ್ಲಾ ಅಡಾಕ್ ಕಮಿಟಿಯು ಸೋಮವಾರ ಬೆಳಿಗ್ಗೆ 10.30 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ (ಹಳೆಯ) ಕಚೇರಿ ಆವರಣದಲ್ಲಿ ಇರುವ ಗಾಂಧಿಭವನದಲ್ಲಿ 2025 ನೇ ಸಾಲಿನ ಪತ್ರಿಕಾ ದಿನಾಚರಣೆಯನ್ನು ಹಮ್ಮಿಕೊಂಡಿದೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಎನ್ .ವೀರಭದ್ರಗೌಡ, ಅಡಾಕ್ ಸಮಿತಿಯ ಸದಸ್ಯರಾದ ಕೆ. ಮಲ್ಲಯ್ಯ ಮೋಕ, ವೆಂಕೋಬಿ ಸಂಗನಕಲ್ಲು ಅವರು ಈ ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ ಅವರು ಪತ್ರಿಕಾ ದಿನಾಚರಣೆಯನ್ನು ಉದ್ಘಾಟನೆ ಮಾಡಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಅಧ್ಯಕ್ಷತೆವಹಿಸಲಿದ್ದಾರೆ.

ದಾವಣಗೆರೆ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರೂ ಆಗಿರುವ ಪ್ರಾಧ್ಯಾಪಕ ಶಿವಕುಮಾರ ಕಣಸೋಗಿ ಅವರು ಮಾಧ್ಯಮ ಕ್ಷೇತ್ರದಲ್ಲಿಯ ಪ್ರಚಲಿತ ವಿದ್ಯಮಾನಗಳ ಕುರಿತು ಉಪನ್ಯಾಸ ನೀಡಲಿದ್ದಾರೆ.

ಮುಖ್ಯ ಅಥಿತಿಗಳಾಗಿ ನಗರದ ಶಾಸಕ ನಾರಾ ಭರತರೆಡ್ಡಿ, ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್, ಮೇಯರ್ ಮುಲ್ಲಂಗಿ ನಂದೀಶ್, ವಿಶೇಷ ಆಹ್ವಾನಿತರಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕಶ, ಕಾರ್ಯದರ್ಶಿ ಸೋಮಶೇಖರ ಕೆರಗೋಡು, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ, ಎಸ್ಪಿ ಡಾ. ಶೋಭಾರಾಣಿ ವಿ.ಜೆ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ. ತುಕರಾಂ ಅವರು ವೇದಿಕೆಯಲ್ಲಿರಲಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಎನ್ .ವೀರಭದ್ರಗೌಡ ಅವರು ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ. ಪಿಯುಸಿ ಮತ್ತು ಎಸ್ ಎಸ್ ಎಲ್ ಸಿಯಲ್ಲಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಪತ್ರಿಕಾ ದಿನಾಚರಣೆ ಅಂಗವಾಗಿ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ತಂಡಗಳಿಗೆ ಟ್ರೋಪಿ ವಿತರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande