ರಾಯಚೂರು, 06 ಜುಲೈ (ಹಿ.ಸ.) :
ಆ್ಯಂಕರ್ : ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪಾಲಿಟೆಕ್ನಿಕ್‍ಗಳಲ್ಲಿ ಪ್ರಥಮ ಸೆಮಿಸ್ಟರ್/ ಲ್ಯಾಟರಲ್ ಎಂಟ್ರಿ 3ನೇ ಸೆಮಿಸ್ಟರ್ ಡಿಪ್ಲೋಮಾಗೆ ಹಾಗೂ ವೃತ್ತಿಪರ ಅಭ್ಯರ್ಥಿಗಳ ಲ್ಯಾಟರಲ್ ಎಂಟ್ರಿ ಪ್ರವೇಶದ ಅವಧಿಯನ್ನು ಜುಲೈ 15ವರೆಗೆ ವಿಸ್ತರಿಸಲಾಗಿದೆ.
ಭರ್ತಿ ಆಗದೇ ಖಾಲಿ ಉಳಿದಿರುವ ಸೀಟುಗಳನ್ನು ಆಫ್‍ಲೈನ್ ಮೂಲಕ ಭರ್ತಿ ಮಾಡಲು ಇಚ್ಚಿಸಿರುವ ಅರ್ಹ ವಿದ್ಯಾರ್ಥಿಗಳು ಸಂಸ್ಥೆಯ ಪ್ರಾಚಾರ್ಯರಿಗೆ ಅರ್ಜಿಯನ್ನು ಜು.15ರೊಳಗಾಗಿ ಸಲ್ಲಿಸಿ ಪ್ರವೇಶ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಮಯದಲ್ಲಿ ಸಂಸ್ಥೆಯ ಪ್ರಾಂಶುಪಾಲರನ್ನು ಸಂಪರ್ಕಿಸುವಂತೆ ರಾಯಚೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಪ್ರಾಚಾರ್ಯರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್