ಬೆಂಗಳೂರು, 06 ಜುಲೈ (ಹಿ.ಸ.) :
ಆ್ಯಂಕರ್ : ಗ್ಯಾರಂಟಿಯಿಂದ ಅಭಿವೃದ್ಧಿಗೆ ತೊಂದರೆ ಆಗಿಲ್ಲವೆಂದು ಬಡಾಯಿ ಕೊಚ್ಚಿಕೊಂಡು ಬರುತ್ತಿದ್ದ ಕಾಂಗ್ರೆಸ್ ಸರ್ಕಾರ ರಾಯರೆಡ್ಡಿ ಹೇಳಿಕೆಗೆ ಏನು ಹೇಳುತ್ತದೆ ಎಂದು ಬಿಜೆಪಿ ಪ್ರಶ್ನಿಸಿದೆ.
ಹಳ್ಳಿಗಳಿಗೆ ರಸ್ತೆ ಬೇಕಾ? ಹಾಗಾದ್ರೆ ಗ್ಯಾರಂಟಿ ಬೇಡ ಎಂದು ಬರೆದುಕೊಡಿ ಎಂದು ಹೇಳುವ ಮೂಲಕ ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದು ಸಿಎಂ ಅರ್ಥಿಕ ಸಲಹೆಗಾರರು, ಕಾಂಗ್ರೆಸ್ ಹಿರಿಯ ಶಾಸಕರಾದ ಬಸವರಾಜ ರಾಯರೆಡ್ಡಿ ನೇರವಾಗಿ ಒಪ್ಪಿಕೊಂಡಿದ್ದಾರೆ.
ಮಹಾದೇವಪ್ಪನಿಗೂ ಫ್ರೀ, ಕಾಕಾ ಪಾಟೀಲನಿಗೂ ಫ್ರೀ ಎಂದು ಅಬ್ಬರಿಸಿ ಬೊಬ್ಬಿರಿದವರು ಇಂದು ಬಿಲ ಸೇರಿದ್ದಾರೆ. ಸಮರ್ಪಕವಾಗಿ ಯಾವ ಗ್ಯಾರಂಟಿಯೂ ರಾಜ್ಯದಲ್ಲಿ ಅನುಷ್ಠಾನವಾಗಿಲ್ಲ, ಅಭಿವೃದ್ಧಿಯಂತೂ ರಾಜ್ಯದ ಜನತೆಗೆ ತಿರುಕನ ಕನಸಾಗಿದೆ. ಕಾಂಗ್ರೆಸ್ ಪಕ್ಷದ ಆಡಳಿತ ವೈಖರಿಗೆ ಸ್ವತಃ ಆಡಳಿತ ಪಕ್ಷದ ಶಾಸಕರೇ ಥಂಡಾ ಹೊಡೆದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa