ಹುಬ್ಬಳ್ಳಿ, 06 ಜುಲೈ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಗ್ಯಾರೆಂಟಿ ಯೋಜನೆಗಳಿಂದ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಸರ್ಕಾರದಲ್ಲಿ ದುಡ್ಡಿಲ್ಲ, ಭ್ರಷ್ಟಾಚಾರ ಮಿತಿ ಮೀರಿದೆ ಎಂಬುದನ್ನು ಸ್ವತಃ ಕಾಂಗ್ರೆಸ್ ಸಚಿವರು, ಶಾಸಕರುಗಳೇ ಒಪ್ಪಿಕೊಳ್ಳುತ್ತಿದ್ದಾರೆ ಹಾಗಾಗಿ ಸ್ಪಷ್ಟ ಹೇಳಿಕೆ ಕೊಡಲು ಮುಖ್ಯಮಂತ್ರಿಗೆ ಧೈರ್ಯವಿಲ್ಲ ಎಂದು ಪ್ರಲ್ಹಾದ ಜೋಶಿ ಟೀಕಿಸಿದರು.
ಈ ಹಿಂದೆ ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಸರ್ಕಾರವೇ ನಂಬರ್ 1 ಎಂದಿದ್ದ ಬಸವರಾಜ ರಾಯರೆಡ್ಡಿ ಅವರು ಇದೀಗ ರಸ್ತೆ ಅಭಿವೃದ್ಧಿ ಬೇಕೆಂದರೆ ಗ್ಯಾರೆಂಟಿಗಳಿಲ್ಲ. ಗ್ಯಾರೆಂಟಿ ಬೇಕೋ? ರಸ್ತೆ ಅಭಿವೃದ್ಧಿ ಬೇಕೋ? ಎಂದಿದ್ದಾರೆ. ಇವರಷ್ಟೇ ಅಲ್ಲ ಕಾಂಗ್ರೆಸ್‌ನ ಎಲ್ಲ ಶಾಸಕರ ಮನಸ್ಥಿತಿ, ಪರಿಸ್ಥಿತಿಯೂ ಇದೇ ಆಗಿದೆ ಎಂದು ಹೇಳಿದರು.
ಸಾಮಾಜಿಕ ಭದ್ರತೆಯ ವೇತನ ಕಡಿತ:
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಾಮಾಜಿಕ ಭದ್ರತೆಯ ವೇತನಗಳನ್ನು ಶೇ.50ರಿಂದ 60ರಷ್ಟು ಕಡಿತಗೊಳಿಸಿದೆ. ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ವಿಧವಾ ವೇತನಾ ಯಾವುದೇ ಅರ್ಹ ಫಲಾನುಭವಿಗಳ ಖಾತೆಗೆ ಸರಿಯಾಗಿ ಜಮಾ ಆಗುತ್ತಿಲ್ಲ ಎಂದು ಸಚಿವ ಜೋಶಿ ಆರೋಪಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa