ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ : ಪ್ರವಾಹದ ಎಚ್ಚರಿಕೆ
ಶಿಮ್ಲಾ, 06 ಜುಲೈ (ಹಿ.ಸ.) : ಆ್ಯಂಕರ್ : ಹಿಮಾಚಲ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಶಿಮ್ಲಾ ಹವಾಮಾನ ಇಲಾಖೆ ರಾಜ್ಯದ 9 ಜಿಲ್ಲೆಗಳಲ್ಲಿ ಪ್ರವಾಹದ ಎಚ್ಚರಿಕೆ ನೀಡಿದೆ. ಮಂಡಿ, ಕಾಂಗ್ರಾ ಮತ್ತು ಸಿರ್ಮೌರ್ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದ್ದು, ಶಿಮ್ಲಾ, ಸೋಲನ್, ಹಮೀರ್‌ಪುರ ಸೇರಿದಂತೆ
Alert


ಶಿಮ್ಲಾ, 06 ಜುಲೈ (ಹಿ.ಸ.) :

ಆ್ಯಂಕರ್ : ಹಿಮಾಚಲ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಶಿಮ್ಲಾ ಹವಾಮಾನ ಇಲಾಖೆ ರಾಜ್ಯದ 9 ಜಿಲ್ಲೆಗಳಲ್ಲಿ ಪ್ರವಾಹದ ಎಚ್ಚರಿಕೆ ನೀಡಿದೆ.

ಮಂಡಿ, ಕಾಂಗ್ರಾ ಮತ್ತು ಸಿರ್ಮೌರ್ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದ್ದು, ಶಿಮ್ಲಾ, ಸೋಲನ್, ಹಮೀರ್‌ಪುರ ಸೇರಿದಂತೆ 9 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ದಿಢೀರ್ ಪ್ರವಾಹದ ಎಚ್ಚರಿಕೆ ನೀಡಲಾಗಿದೆ.

ಮಂಡಿ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿ ಎರಡು ಸೇತುವೆಗಳು ಕೊಚ್ಚಿ ಹೋಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಂಗ್ರಾ ಜಿಲ್ಲೆಯ ನಗರೋಟಾ ಸೂರಿಯನ್‌ನಲ್ಲಿ 102 ಮಿಮೀ ಮಳೆಯಾಗಿದೆ.

ರಾಜ್ಯದಲ್ಲಿ ಈವರೆಗೆ 269 ರಸ್ತೆಗಳು, 278 ನೀರಿನ ಯೋಜನೆಗಳು ಮತ್ತು 285 ವಿದ್ಯುತ್ ಪರಿವರ್ತಕಗಳು ಹಾನಿಗೊಳಗಾಗಿವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande