ಹುಬ್ಬಳ್ಳಿ, 06 ಜುಲೈ (ಹಿ.ಸ.) :
ಆ್ಯಂಕರ್ : ಹುಬ್ಬಳ್ಳಿಯಲ್ಲಿ ನಿರ್ಮಾಣದಡಿಯಲ್ಲಿ ಇರುವ ಮೇಲ್ಸೇತುವೆ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ಇಂದು ನಡೆಸಲಾಯಿತು.
ಈ ಸಭೆಯಲ್ಲಿ ಸ್ಥಳೀಯ ಶಾಸಕರಾದ ಅರವಿಂದ ಬೆಲ್ಲದ, ಜಿಲ್ಲಾಧಿಕಾರಿ, ಪೋಲಿಸ್ ಆಯುಕ್ತರು, ಮಹಾನಗರ ಪಾಲಿಕೆ ಆಯುಕ್ತರು, ರಾಷ್ಟ್ರೀಯ ಹೆದ್ದಾರಿ ಮತ್ತು ಲೋಕೋಪಯೋಗಿ ಇಲಾಖೆಯ ಚೀಫ್ ಎಂಜಿನಿಯರ್, ಸೂಪರಿಂಟೆಂಡಿಂಗ್ ಎಂಜಿನಿಯರ್, ಕಾರ್ಯನಿರ್ವಾಹಕ ಎಂಜಿನಿಯರ್, ಮತ್ತು ಸ್ಮಾರ್ಟ್ ಸಿಟಿ ಯೋಜನೆಯ ಅಧಿಕಾರಿಗಳು ಭಾಗವಹಿಸಿದರು.
ಸಭೆಯಲ್ಲಿ ಕಾಮಗಾರಿಯ ಮುಂದಿನ ಹಂತಗಳನ್ನು ಚರ್ಚಿಸಿ, ಈ ಯೋಜನೆಯ ಕಾರ್ಯಾರಂಭದಿಂದಲೂ ತಕ್ಷಣದ ತೀವ್ರತೆಯಿಂದ ಕಾರ್ಯ ನಡೆಸಬೇಕೆಂದು ಸೂಚನೆ ನೀಡಲಾಯಿತು. ಈಗಾಗಲೇ ನಿಗದಿಪಡಿಸಲಾದ ಅವಧಿಯ ಒಳಗೆ ಕಾಮಗಾರಿ ಪೂರ್ಣಗೊಳ್ಳಬೇಕೆಂಬುದರ ಜೊತೆಗೆ, ಸಾರ್ವಜನಿಕರಿಗೆ ಶೀಘ್ರದಲ್ಲೇ ಸಂಚಾರದ ಅನುಕೂಲತೆ ಒದಗಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa