ನವದೆಹಲಿ, 06 ಜುಲೈ (ಹಿ.ಸ.) :
ಆ್ಯಂಕರ್ : ಹಜರತ್ ಇಮಾಮ್ ಹುಸೇನ್ ಅವರ ತ್ಯಾಗ ಧರ್ಮದ ಬಗೆಗಿನ ಅವರ ಬದ್ಧತೆಯ ಪ್ರತಿಬಿಂಬವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಪ್ರತಿಕೂಲ ಸಂದರ್ಭಗಳಲ್ಲಿಯೂ ಸಹ ಅವರು ಸತ್ಯದ ಮಾರ್ಗವನ್ನು ಅನುಸರಿಸಲು ಜನರನ್ನು ಪ್ರೇರೇಪಿಸುತ್ತಾರೆ ಎಂದು ಪ್ರಧಾನಿ ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿದ್ದಾರೆ.
ಇಂದು ಮೊಹರಂ ತಿಂಗಳ 10ನೇ ದಿನವಾದ ಅಶೂರಾ ದಿನವಾಗಿದ್ದು, ಕರ್ಬಲಾ ಯುದ್ಧದಲ್ಲಿ ಇಮಾಮ್ ಹುಸೇನ್ ಮತ್ತು ಅವರ ಕುಟುಂಬದವರ ಬಲಿದಾನವನ್ನು ನೆನಪಿಸುವ ಪವಿತ್ರ ದಿನವಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa