ಜುಲೈ 12ರಂದು ಜಿಲ್ಲೆಯಲ್ಲಿ ರಾಷ್ಟೀಯ ಲೋಕ ಅದಾಲತ್
ರಾಯಚೂರ, 06 ಜುಲೈ (ಹಿ.ಸ.) : ಆ್ಯಂಕರ್ : ಜಿಲ್ಲೆಯಲ್ಲಿ ಜುಲೈ 12ರಂದು ರಾಷ್ಟೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರು, ಕಕ್ಷಿಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸದಾವಕಾಶವಾಗಿದೆ
ಜುಲೈ 12ರಂದು ಜಿಲ್ಲೆಯಲ್ಲಿ ರಾಷ್ಟೀಯ ಲೋಕ ಅದಾಲತ್


ರಾಯಚೂರ, 06 ಜುಲೈ (ಹಿ.ಸ.) :

ಆ್ಯಂಕರ್ : ಜಿಲ್ಲೆಯಲ್ಲಿ ಜುಲೈ 12ರಂದು ರಾಷ್ಟೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರು, ಕಕ್ಷಿಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸದಾವಕಾಶವಾಗಿದೆ ಎಂದು ಗೌರವಾನ್ವಿತ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಎ.ಸಾತ್ವಿಕ್ ಅವರು ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲೆಯ ಎಲ್ಲಾ ತಾಲೂಕು ನ್ಯಾಯಾಲಯ ಹಾಗೂ ಜಿಲ್ಲಾ ನ್ಯಾಯಾಲಯದಲ್ಲಿ ರಾಷ್ಟೀಯ ಲೋಕ ಅದಾಲತ್‍ನ್ನು ನಿಗದಿಪಡಿಸಲಾಗಿದ್ದು, ಲೋಕ ಅದಾಲತ್‍ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಸಿವಿಲ್ ಮತ್ತು ಕ್ರಿಮಿನಲ್ (ರಾಜಿಯಾಗುವಂತಹ) ಮೊಕದ್ದಮೆಗಳು, ಅಲ್ಲದೇ ಮೋಟಾರ ವಾಹನ ಕಾಯ್ದೆ, ಕುಟುಂಬ ನ್ಯಾಯಾಲಯದ ಪ್ರಕರಣಗಳು ಮತ್ತು ಎಲ್ಲಾ ಬಗೆಯ ಪ್ರಕರಣಗಳನ್ನು ಲೋಕ ಅದಾಲತ್ ಮುಖಾಂತರ ಇತ್ಯರ್ಥಗೊಳಿಸಲಾಗುವುದು. ಆದ್ದರಿಂದ ವಕೀಲರು, ಕಕ್ಷಿದಾರರು, ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಷ್ಟೀಯ ಲೋಕ ಅದಾಲತ್ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಸದಾವಕಾಶವನ್ನು ಒದಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande