ಎಸ್.ಎಸ್.ಎಲ್.ಸಿ. ಪರೀಕ್ಷೆ-3ರ ಕೇಂದ್ರಗಳ ಸುತ್ತ ನಿಷೇದಾಜ್ಞೆ
ರಾಯಚೂರು, 06 ಜುಲೈ (ಹಿ.ಸ.) : ಆ್ಯಂಕರ್ : ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ-3 ಜುಲೈ 12ರವರೆಗೆ ನಡೆಯಲಿರುವ ಹಿನ್ನೆಲೆ ಪರೀಕ್ಷಾ ಕೇಂದ್ರಗಳ ಸುತ್ತ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರನ್ವಯ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರ
ಎಸ್.ಎಸ್.ಎಲ್.ಸಿ. ಪರೀಕ್ಷೆ-3ರ ಕೇಂದ್ರಗಳ ಸುತ್ತ ನಿಷೇದಾಜ್ಞೆ


ರಾಯಚೂರು, 06 ಜುಲೈ (ಹಿ.ಸ.) :

ಆ್ಯಂಕರ್ : ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ-3 ಜುಲೈ 12ರವರೆಗೆ ನಡೆಯಲಿರುವ ಹಿನ್ನೆಲೆ ಪರೀಕ್ಷಾ ಕೇಂದ್ರಗಳ ಸುತ್ತ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರನ್ವಯ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ನಿತೀಶ್ ಕೆ. ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ 03 ಕೇಂದ್ರ, ಲಿಂಗಸೂಗೂರು ತಾಲೂಕಿನಲ್ಲಿ 08 ಕೇಂದ್ರ, ಮಾನವಿ ತಾಲೂಕಿನಲ್ಲಿ 05 ಕೇಂದ್ರ, ರಾಯಚೂರು ತಾಲೂಕಿನಲ್ಲಿ 11 ಕೇಂದ್ರ ಹಾಗೂ ಸಿಂಧನೂರು ತಾಲೂಕಿನಲ್ಲಿ 04 ಕೇಂದ್ರ ಸೇರಿದಂತೆ ಒಟ್ಟು 31 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಪರೀಕ್ಷೆಯು ಸುಗಮವಾಗಿ ನಡೆಯಲು ಆಯಾ ಪರೀಕ್ಷಾ ದಿನದಂದು ಆಯಾ ಪರೀಕ್ಷಾ ಕೇಂದ್ರಗಳ ಸುತ್ತಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಈ ಪರೀಕ್ಷೆ ಕೇಂದ್ರಗಳಿಗೆ ನಿಯೋಜಿಸಿದ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಹೊರತುಪಡಿಸಿ ಯಾರೂ ನಿಷೇಧಿತ ಪ್ರದೇಶವನ್ನು ಪ್ರವೇಶಿಸಕೂಡದು. ಸದರಿ ದಿನಗಳಂದು ಪರೀಕ್ಷೆ ಕೇಂದ್ರಗಳಿಗೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಮೊಬೈಲ್ ಫೋನ್ , ಪಠ್ಯ ಪುಸ್ತಕಗಳು ಹಾಗೂ ಕ್ಯಾಲ್ಕುಲೇಟರ್‍ಗಳು ತರುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ ಎಲ್ಲಾ ಝರಾಕ್ಸ್ ಅಂಗಡಿಗಳನ್ನು ಹಾಗೂ ಸೈಬರ್ ಕೆಫೆಗಳನ್ನು ಪರೀಕ್ಷಾ ಸಮಯದಲ್ಲಿ ಕಡ್ಡಾಯವಾಗಿ ಮುಚ್ಚಬೇಕೆಂದು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande