ಹೂವಿನಹಡಗಲಿ, 06 ಜುಲೈ (ಹಿ.ಸ.) :
ಆ್ಯಂಕರ್ : ಹೂವಿನ ಹಡಗಲಿ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆಯಲ್ಲಿ ಜುಲೈ 7 ರಂದು ಬೆ.9 ಗಂಟೆಗೆ ಅಪ್ರೆಂಟಿಸ್ ತರಬೇತಿಗೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಐಟಿಐ ಪಾಸಾದ ತರಬೇತಿದಾರರು ಹಾಗೂ ಅಂತಿಮ ವರ್ಷದಲ್ಲಿ ತರಬೇತಿ ಪಡೆಯುತ್ತಿರುವ ತರಬೇತಿದಾರರು ಅಪ್ರೆಂಟಿಸ್ ತರಬೇತಿಗೆ ಆಯ್ಕೆಯಲ್ಲಿ ಭಾಗವಹಿಸಬಹುದು.
ಹಾಜರಾಗುವ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ಆಗಮಿಸಬೇಕು. ಆಸಕ್ತರು 18 ರಿಂದ 25 ವರ್ಷ ವಯೋಮಿತಿ ಹೊಂದಿರಬೇಕು.
ಹೋಂಡಾ ಮೊಟಾರ್ ಸೈಕಲ್ ಅಂಡ್ ಸ್ಕೂಟರ್ ಇಂಡಿಯಾ ಪ್ರೈ.ಲಿ ನ ಉದ್ಯಮದವರು ಅಪ್ರೆಂಟಿಸ್ ತರಬೇತಿ ಹಮ್ಮಿಕೊಳ್ಳಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕೆ.ಗವಿಶಂಕರ್, ಪ್ರಾಚಾರ್ಯರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಹೂವಿನಹಡಗಲಿ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್