ಶಿವಮೊಗ್ಗ ವಿಗ್ರಹ ಅವಮಾನ ಪ್ರಕರಣ : ಇಬ್ಬರು ಆರೋಪಿಗಳ ಬಂಧನ
ಶಿವಮೊಗ್ಗ, 06 ಜುಲೈ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ನಗರದ ಬಂಗಾರಪ್ಪ ಬಡಾವಣೆಯಲ್ಲಿ ನಡೆದ ವಿಗ್ರಹ ಅವಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೆಹಮತ್‌ಲ್ಲಾ ಹಾಗೂ ಸದ್ದಾಂ ಎಂಬವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಜುಲೈ 5ರ ಸಂಜ
Arrest


ಶಿವಮೊಗ್ಗ, 06 ಜುಲೈ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ನಗರದ ಬಂಗಾರಪ್ಪ ಬಡಾವಣೆಯಲ್ಲಿ ನಡೆದ ವಿಗ್ರಹ ಅವಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೆಹಮತ್‌ಲ್ಲಾ ಹಾಗೂ ಸದ್ದಾಂ ಎಂಬವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

ಜುಲೈ 5ರ ಸಂಜೆ, ಬಂಗಾರಪ್ಪ ಬಡಾವಣೆಯ ಮುಖ್ಯ ರಸ್ತೆಯ ಪಕ್ಕದ ಪಾರ್ಕ್‌ನಲ್ಲಿ ಪ್ರತಿಷ್ಠಾಪಿತ ಗಣೇಶನ ಮೂರ್ತಿಗೆ ಕಾಲಿಟ್ಟು, ನಾಗನ ವಿಗ್ರಹವನ್ನು ಚರಂಡಿಗೆ ಎಸೆದು ಆರೋಪಿಗಳು ಪರಾರಿಯಾಗಿದ್ದರು. ಈ ಘಟನೆ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಕೆಲಕಾಲ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಸ್ಥಳೀಯರು ಆರೋಪಿಗಳನ್ನು ತರಾಟೆಗೆ ತೆಗೆದುಕೊಂಡಿರುವ ದೃಶ್ಯಗಳು ಮೊಬೈಲ್‌ನಲ್ಲಿ ಸೆರೆ ಸಿಕ್ಕಿವೆ. ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿದ ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್‌ಕುಮಾರ್ ಅವರು ಜನರನ್ನು ಸಮಾಧಾನಪಡಿಸಿ, ಕಾನೂನು ಉಲ್ಲಂಘಿಸಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸ್ಥಳಕ್ಕೆ ಭೇಟಿ ನೀಡಿದ ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಅವರು, ಘಟನೆಯನ್ನು ಖಂಡಿಸಿದ್ದು ಕಾನೂನುಬಾಹಿರವಾಗಿ ಕಟ್ಟಡ ನಿರ್ಮಿಸುತ್ತಿದ್ದ ವ್ಯಕ್ತಿಯ ಮೇಲೂ ಕ್ರಮ ಕೈಗೊಳ್ಳಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ಆಗ್ರಹಿಸಿದರು.

ಸ್ಥಳೀಯರ ಪ್ರಕಾರ, ಆರೋಪಿಗಳು ಹೊರಗಿನಿಂದ ಬಂದವರಾಗಿದ್ದು, ಈ ಪ್ರದೇಶದಲ್ಲಿ ವಿವಿಧ ಜಾತಿ-ಧರ್ಮಗಳ ಜನರು ಸೌಹಾರ್ದಯುತವಾಗಿ ವಾಸವಿದ್ದವರ ನಡುವೆ ಈ ರೀತಿ ಕೃತ್ಯ ನಡೆದಿರುವುದು ವಿಷಾದನೀಯ. ಪೊಲೀಸ್ ಇಲಾಖೆ ಈಗಾಗಲೇ ಶಾಂತಿ-ಸುವ್ಯವಸ್ಥೆಗೆ ಭಂಗ ತಂದವರನ್ನು ಗುರುತಿಸಿ, ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲು ಸಜ್ಜಾಗಿದೆ.

ಪರಿಸ್ಥಿತಿ ಈಗ ನಿಯಂತ್ರಣದಲ್ಲಿ , ಬಂಗಾರಪ್ಪ ಬಡಾವಣೆ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande