ಸುಳ್ಳು ಸುದ್ದಿ ಹರಡುವ ಸಿದ್ದರಾಮಯ್ಯ ಸರಕಾರ : ಅಶೋಕ ವ್ಯಂಗ್ಯ
ಬೆಂಗಳೂರು, 06 ಜುಲೈ (ಹಿ.ಸ.) : ಆ್ಯಂಕರ್ : ಸುಳ್ಳು ಸುದ್ದಿ ಹರಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಸುಳ್ಳು ಸುದ್ದಿ ತಡೆಗೆ ಕಾನೂನು ರೂಪಿಸಲು ಹೊರಟಿರುವುದು ಈ ಶತಮಾನದ ಅತ್ಯಂತ ದೊಡ್ಡ ವಿಪರ್ಯಾಸ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ ವ್ಯಂಗ್ಯವಾಡಿದ್ದಾರೆ. ಕಲಬುರ್ಗಿ ಜಿಲ್
ಸುಳ್ಳು ಸುದ್ದಿ ಹರಡುವ ಸಿದ್ದರಾಮಯ್ಯ ಸರಕಾರ : ಅಶೋಕ ವ್ಯಂಗ್ಯ


ಬೆಂಗಳೂರು, 06 ಜುಲೈ (ಹಿ.ಸ.) :

ಆ್ಯಂಕರ್ : ಸುಳ್ಳು ಸುದ್ದಿ ಹರಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಸುಳ್ಳು ಸುದ್ದಿ ತಡೆಗೆ ಕಾನೂನು ರೂಪಿಸಲು ಹೊರಟಿರುವುದು ಈ ಶತಮಾನದ ಅತ್ಯಂತ ದೊಡ್ಡ ವಿಪರ್ಯಾಸ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ ವ್ಯಂಗ್ಯವಾಡಿದ್ದಾರೆ.

ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಅವರೇ, ರಾಜ್ಯದಲ್ಲಿ ಸಂಭವಿಸುತ್ತಿರುವ ಹಾರ್ಟ್ ಅಟ್ಯಾಕ್ ಗಳಿಗೆ ಕೋವಿಡ್ ಲಸಿಕೆ ಕಾರಣವಲ್ಲ ಎಂದು ತಜ್ಞರ ವರದಿ ಸ್ಪಷ್ಟಪಡಿಸಿದೆ.

ಹಾರ್ಟ್ ಅಟ್ಯಾಕ್ ಗಳಿಗೆ ಕೋವಿಡ್ ಲಸಿಕೆಗೆ ತರಾತುರಿಯಲ್ಲಿ ಅನುಮೋದನೆ ನೀಡಿ ಲಸಿಕೆ ಕೊಟ್ಟಿದ್ದೇ ಕಾರಣ ಎಂದು ಸುಳ್ಳು ಸುದ್ದಿ ಹರಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಸುಳ್ಳು ಸುದ್ದಿ ಕೇಸು ಹಾಕ್ತೀರಾ? ಬೇಕಾದರೆ ನಿಮ್ಮ ಚೀಫ್ ರಾಹುಲ್ ಗಾಂಧಿ ಅವರ ಕೈಯಲ್ಲಿ ಫ್ಯಾಕ್ಟ್ ಚೆಕ್ ಮಾಡಿಸಿ ಆಮೇಲೆ ಕೇಸು ಹಾಕಿ. ರಾಜ್ಯದ ಮುಖ್ಯಮಂತ್ರಿಗಳೇ ಸುಳ್ಳು ಸುದ್ದಿ ಹರಡುವ ಬ್ರ್ಯಾಂಡ್ ಅಂಬಾಸಿಡರ್ ಆಗಿರುವುದು ಕರ್ನಾಟಕದ ದುರಂತ ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande