ಶಿವಮೊಗ್ಗ, 07 ಜುಲೈ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2025-26ನೇ ಸಾಲಿನಲ್ಲಿ ಬೀದಿನಾಟಕ ಪ್ರದರ್ಶನ ಮತ್ತು ಜಾನಪದ ಸಂಗೀತ ಕಾರ್ಯಕ್ರಮಗಳ ಮೂಲಕ ಸರ್ಕಾರದ ನಾನಾ ಯೋಜನೆಗಳು/ಕಾರ್ಯಕ್ರಮಗಳ ಕುರಿತಂತೆ ಪ್ರಚಾರ ಕೈಗೊಳ್ಳಲು ಅರ್ಹ ಆಸಕ್ತ ಕಲಾತಂಡಗಳಿಂದ ಅರ್ಜಿ ಆಹ್ವಾನಿಸಿದೆ.
ಜಿಲ್ಲಾ ಮಟ್ಟದಲ್ಲಿ ಅಧೀನ ಕಚೇರಿಗಳ ಮೂಲಕ 2025-26ನೆ ಸಾಲಿನಲ್ಲಿ ಬೀದಿನಾಟಕ/ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಅನುಕೂಲವಾಗುವಂತೆ ಪ್ರತಿ ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾತಂಡಗಳ್ನು ಆಯ್ಕೆ ಮಾಡಿಕೊಳ್ಳಲಾಗುವುದು.
ಪ್ರತಿ ಬೀದಿನಾಟಕ ತಂಡದಲ್ಲಿ 8 ಜ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರನ್ನೊಳಗೊಂಡಿರಬೇಕು.
ಪ್ರತಿ ಜಾನಪದ ಸಂಗೀತ ಕಲಾತಂಡದಲ್ಲಿ 3 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಒಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರು ಇರುವುದು ಕಡ್ಡಾಯವಾಗಿದೆ.
ಕಲಾತಂಡಗಳ ಆಯ್ಕೆ ಮಾಡಲು ಜಿಲ್ಲಾ ಮಟ್ಟದಲ್ಲಿ ಕ್ನನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ, ಪರಿಶಿಷ್ಟ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೃಷಿ ಇಲಾಖೆಯ ಜಿಲ್ಳಾ ಮಟ್ಟದ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗಿದ್ದು, 2025ರ ಆಗಸ್ಟ್ 12 ರಂದು ಬೆಳಿಗ್ಗೆ 11 ಗಂಟೆಗೆ ರಾಜ್ಯಾದ್ಯಂತ 31 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು.
ಜಿಲ್ಲೆಯ ಆಸಕ್ತ ಬೀದಿ ನಾಟಕ ತಂಡಗಳು ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ದಿ: 05/08/2025 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa