ಸಕಲೇಶಪುರ, 07 ಜುಲೈ (ಹಿ.ಸ.) :
ಆ್ಯಂಕರ್ : ಸಕಲೇಶಪುರ ತಾಲೂಕು ಕ್ಯಾನಹಳ್ಳಿ ಗ್ರಾಮ ಮತ್ತು ಒಳಲಹಳ್ಳಿ ಪಂಚಾಯಿತಿಯ ಚಿನ್ನಹಳ್ಳಿ ಗ್ರಾಮದಲ್ಲಿ ಅತಿಹೆಚ್ಚು ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ಭೇಟಿ ನೀಡಿದರು.
ಮಳೆಯಿಂದ ಕಾಫಿ, ಕಾಳುಮೆಣಸು, ಅಡಿಕೆ ಬೆಳೆಗಳು ಬಹುತೇಕ ಹಾನಿಯಾಗಿದ್ದು, ಬೆಳೆಗಾರರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಸೆಮೆಂಟ್ ಮಂಜು ಹಾಸನ ಬಿಜೆಪಿ ಜಿಲ್ಲಾಧ್ಯಕ್ಷರಾದ ಸಿದ್ದೇಶ್ ನಾಗೇಂದ್ರ ರವರು, ಕಾಫಿ ಬೋರ್ಡ್ ಸದಸ್ಯರು, ಬೆಳೆಗಾರರು, ರೈತರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa