ರಾಯಪುರ್, 07 ಜುಲೈ (ಹಿ.ಸ.) :
ಆ್ಯಂಕರ್ : ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಛತ್ತೀಸ್‌ಗಢದ ರಾಯ್‌ಪುರಕ್ಕೆ ಒಂದು ದಿನದ ಅಧಿಕೃತ ಭೇಟಿಗೆ ಆಗಮಿಸುತ್ತಿದ್ದಾರೆ. ರಾಯ್‌ಪುರ ವಿಜ್ಞಾನ ಕಾಲೇಜು ಮೈದಾನದಲ್ಲಿ ನಡೆಯುವ ಕಿಸಾನ್-ಜವಾನ್-ಸಂವಿಧಾನ್ ಜನ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ರಾಜ್ಯ ಕಾಂಗ್ರೆಸ್ ಕಚೇರಿ ಪ್ರಕಟಿಸಿರುವ ವೇಳಾಪಟ್ಟಿಯ ಪ್ರಕಾರ, ಸುಮಾರು ಎರಡು ಗಂಟೆಗಳ ಕಾಲ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವ ಖರ್ಗೆ ಅವರು ನಂತರ ರಾಜೀವ್ ಭವನದಲ್ಲಿರುವ ಕಾಂಗ್ರೆಸ್ ಕಚೇರಿಗೆ ತೆರಳಲಿದ್ದಾರೆ. ಅಲ್ಲಿ ಅವರು ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯ ಸಭೆ ನಡೆಸಲಿದ್ದು, ಸಂಜೆ 5 ಗಂಟೆಗೆ ರಾಜ್ಯ ಕಾರ್ಯಕಾರಿಣಿಯ ಮಹತ್ವದ ಸಭೆ ನಡೆಸಲಿದ್ದಾರೆ.
ಕಳೆದ ಎರಡು ದಿನಗಳಿಂದ ರಾಯ್‌ಪುರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ವಿಜ್ಞಾನ ಕಾಲೇಜು ಮೈದಾನದ ಪ್ರಮುಖ ವೇದಿಕೆ ನೀರಿನಿಂದ ಆವರಿಸಿರುವುದು ಸವಾಲಾಗಿ ಪರಿಣಮಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa