ವಿಜಯಪುರ, 07 ಜುಲೈ (ಹಿ.ಸ.) :
ಆ್ಯಂಕರ್ : ಅನುದಾನಿತ ಪ್ರೌಢಶಾಲೆಯಲ್ಲಿ ಅವ್ಯವಹಾರ ಹಾಗೂ ಇಂಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರುದ್ಧ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾದಿ ಕಚೇರಿಯ ಎದುರು ಸಾಮಾಜಿಕ ಹೋರಾಟಗಾರ ವಿಕಾಸ್ ಹೊಸಮನಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಇಂಡಿಯಲ್ಲಿರುವ ಐ ಜಿ ಜಾಮಗೊಂಡಿ ಶಾಲೆಯವರು ತಪ್ಪು ಮಾಹಿತಿ ನೀಡಿ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡಿದ್ದಾರೆ. ಅದಕ್ಕಾಗಿ ಇದನ್ನು ಮರು ತನಿಖೆಗೆ ಆಗ್ರಹಿಸಿದ್ರೇ ಇಂಡಿ ಕ್ಷೇತ್ರ ಶಿಕ್ಷಣಾಧಿಕಾರಿ ಸೈಯಿದಾ ಅನೀಸ್ ಬೇಜವಾಬ್ದಾರಿಯಿಂದ ವರ್ತನೆ ಮಾಡುತ್ತಾರೆ ಎಂದು ಕಿಡಿಕಾರಿದರು. ಅದಕ್ಕಾಗಿ ಜಾಮಗೊಂಡಿ ಶಾಲೆಯ ವಿರುದ್ಧ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande