ಶಿವಮೊಗ್ಗ, 07 ಜುಲೈ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಕ್ಷೇತ್ರಗಳಲ್ಲಿ ರಸ್ತೆಗಳಾಗಬೇಕಾದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕಾಗುತ್ತದೆ ಎಂದು ಹೇಳಿರುವಾಗ ರಾಜ್ಯದ ಆರ್ಥಿಕ ಸ್ಥಿತಿ ಯಾವಮಟ್ಟಿಗೆ ಕುಸಿದಿದೆ ಎಂಬುದನ್ನು ಅರ್ಥಮಾಡಿಕೊಳ್ಳಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು ರಾಯರೆಡ್ಡಿಯವರಿಂದ ಸಿದ್ದರಾಮಯ್ಯ ಈ ಮಾತುಗಳನ್ನು ಹೇಳಿಸುತ್ತಿದ್ದಾರೆ. ಅವರಿಗೆ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಲು ಸಾಧ್ಯವಾಗುತ್ತಿಲ್ಲ, ಸರ್ಕಾರಿ ನೌಕರರಿಗೆ ಸಂಬಳ ನೀಡಲೂ ದುಡ್ಡಿಲ್ಲ ಎಂದು ಬಿಜೆಪಿ ಹೇಳಿದರೆ ಅದೆಲ್ಲ ಸುಳ್ಳು ಎಂದು ಮುಖ್ಯಮಂತ್ರಿ ಹೇಳುತ್ತಾರೆ ಎಂದು ವಿಜಯೇಂದ್ರ ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa