ಶಾಲಾ ವಾಹನಕ್ಕೆ ರೈಲು ಡಿಕ್ಕಿ : ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರ ಸಾವು
ಚೆನ್ನೈ, 08 ಜುಲೈ (ಹಿ.ಸ.) : ಆ್ಯಂಕರ್ : ತಮಿಳುನಾಡಿನ ಕಡಲೂರು ಜಿಲ್ಲೆಯ ಸೆಮ್ಮನ್‌ಕುಪ್ಪಂನಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ, ಶಾಲಾ ವ್ಯಾನ್ ರೈಲಿಗೆ ಡಿಕ್ಕಿಯಾದ ಪರಿಣಾಮ ಇಬ್ಬರು ಮಕ್ಕಳೊಡನೆ ಮೂವರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಬೆಳಿಗ್ಗೆ ವಿಲ್ಲುಪುರಂ-ಮೈಲಾಡುತುರೈ ಪ್ಯಾಸ
ಶಾಲಾ ವಾಹನಕ್ಕೆ ರೈಲು ಡಿಕ್ಕಿ : ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರ ಸಾವು


ಚೆನ್ನೈ, 08 ಜುಲೈ (ಹಿ.ಸ.) :

ಆ್ಯಂಕರ್ : ತಮಿಳುನಾಡಿನ ಕಡಲೂರು ಜಿಲ್ಲೆಯ ಸೆಮ್ಮನ್‌ಕುಪ್ಪಂನಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ, ಶಾಲಾ ವ್ಯಾನ್ ರೈಲಿಗೆ ಡಿಕ್ಕಿಯಾದ ಪರಿಣಾಮ ಇಬ್ಬರು ಮಕ್ಕಳೊಡನೆ ಮೂವರು ವ್ಯಕ್ತಿಗಳು ಮೃತಪಟ್ಟಿದ್ದಾರೆ.

ಬೆಳಿಗ್ಗೆ ವಿಲ್ಲುಪುರಂ-ಮೈಲಾಡುತುರೈ ಪ್ಯಾಸೆಂಜರ್ ರೈಲು, ರೈಲ್ವೆ ಕ್ರಾಸಿಂಗ್ ದಾಟುತ್ತಿದ್ದ ಶಾಲಾ ವ್ಯಾನ್‌ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ತೀವ್ರತೆಗೆ ವ್ಯಾನ್ ಸಂಪೂರ್ಣ ನಾಶವಾಗಿದೆ.

ನಿಮಿಷೇಶ್ (12) ಮತ್ತು ಡಿ. ಚಾರುಮತಿ (16) ವಿದ್ಯಾರ್ಥಿಗಳು

ಮತ್ತು ಅಣ್ಣಾದೊರೈ (55)ಮೃತ ದುರ್ದೈವಿಗಳು.

ಶಾಲಾ ವ್ಯಾನ್‌ ಚಾಲಕ ಹಾಗೂ ಆರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಕಡಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಬಗ್ಗೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತೀವ್ರ ದುಃಖ ವ್ಯಕ್ತಪಡಿಸಿ, ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಗಂಭೀರ ಗಾಯಾಳು ಮಕ್ಕಳಿಗೆ ₹1 ಲಕ್ಷ ಹಾಗೂ ಸಾಮಾನ್ಯ ಗಾಯಾಳುಗಳಿಗೆ ₹50,000 ಪರಿಹಾರವನ್ನು ಘೋಷಿಸಿದ್ದಾರೆ.

ರೈಲ್ವೆ ಇಲಾಖೆ ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande