ಕೊಪ್ಪಳ : ಅಪ್ರಾಪ್ತಳ ಮೇಲೆ ಅತ್ಯಾಚಾರ, ಪಶ್ವಿಮ ಬಂಗಾಳದ ಆರೋಪಿಗೆ ಶಿಕ್ಷೆ
ಕೊಪ್ಪಳ, 08 ಜುಲೈ (ಹಿ.ಸ.) : ಆ್ಯಂಕರ್ : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪಶ್ಚಿಮ ಬಂಗಾಳ ರಾಜ್ಯದ ಮಾಣಿಕರಾಯ್ ತಂದೆ ಚಂದುರಾಯ್ ಇತನ ಮೇಲಿನ ಆರೋಪಸಾಭಿತಾಗಿದೆ ಎಂದು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ (ಪೋಕ್ಸೊ) ನ್ಯಾಯಾಧ
ಕೊಪ್ಪಳ : ಅಪ್ರಾಪ್ತಳ ಮೇಲೆ ಅತ್ಯಾಚಾರ, ಪಶ್ವಿಮ ಬಂಗಾಳದ ಆರೋಪಿಗೆ ಶಿಕ್ಷೆ


ಕೊಪ್ಪಳ, 08 ಜುಲೈ (ಹಿ.ಸ.) :

ಆ್ಯಂಕರ್ : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪಶ್ಚಿಮ ಬಂಗಾಳ ರಾಜ್ಯದ ಮಾಣಿಕರಾಯ್ ತಂದೆ ಚಂದುರಾಯ್ ಇತನ ಮೇಲಿನ ಆರೋಪಸಾಭಿತಾಗಿದೆ ಎಂದು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ (ಪೋಕ್ಸೊ) ನ್ಯಾಯಾಧೀಶರು ಆರೋಪಿಗೆ ಶಿಕ್ಷೆ ವಿಧಿಸಿರುತ್ತಾರೆ.

ಮಾಣಿಕರಾಯ್ ತಂದೆ ಚಂದುರಾಯ್ ಹಾಗೂ ಅಪ್ರಾಪ್ತ ವಯಸ್ಸಿನ ಬಾಲಕಿ ಇವರು ಮೂಲತಃ ಪಶ್ವಿಮ ಬಂಗಾಳ ರಾಜ್ಯದವರಿದ್ದು, ಮಾಣಿಕರಾಯ್ ಇತನು ಬಾಧಿತ ಬಾಲಕಿಗೆ ಪರಿಚಯ ಮಾಡಿಕೊಂಡು ಪ್ರೀತಿಸುವದಾಗಿ ಹೇಳುತ್ತ ಬಂದಿರುತ್ತಾನೆ. ಬಾಲಕಿಯನ್ನು ಅವರ ತಂದೆ ಪಿರ‍್ಯಾಧಿದಾರರು ಪಶ್ಚಿಮ ಬಂಗಾಳ ರಾಜ್ಯದ ದಾಂತಲಾದಿಂದ ಕೊಪ್ಪಳಕ್ಕೆ ಕರೆದುಕೊಂಡು ಬಂದಿದ್ದರೂ ಆರೋಪಿತನು ಫೋನ್ ಮೂಲಕ ಫೋನಿನಲ್ಲಿ ಮಾತನಾಡುತ್ತಿರುತ್ತಾನೆ.

ದಿ: 29-03-2022 ರಂದು ಮದ್ಯಾಹ್ನ 1 ಗಂಟೆ ಸುಮಾರಿಗೆ ಆರೋಪಿತನು ಕೊಪ್ಪಳಕ್ಕೆ ಬಂದು ಬಾಧಿತಳಿಗೆ ಪೋನ್ ಮಾಡಿ ಕೊಪ್ಪಳ ಬಸ್ ನಿಲ್ದಾಣಕ್ಕೆ ಬರುವಂತೆ ತಿಳಿಸಿದ್ದರಿಂದ ಬಾಧಿತಳು ಅಲ್ಲಿಗೆ ಹೋದಾಗ ಪುಸಲಾಯಿಸಿ ಹೊಸಪೇಟೆಗೆ ಕರೆದುಕೊಂಡು ಹೋಗಿ ದಿ: 30-03-2022 ರ ಮಧ್ಯಾಹ್ನ ಶ್ರೀರಂಗಪಟ್ಟಣದಲ್ಲಿ ಒಂದು ರೂಮ್ ಬಾಡಿಗೆಗೆ ಪಡೆದುಕೊಂಡು ಬಾಧಿತಳಿಗೆ ಹಲವಾರು ಸಲ ಲೈಂಗಿಕ ಅತ್ಯಾಚಾರ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಕೊಪ್ಪಳ ಮಹಿಳಾ ಪೊಲೀಸ್ ಠಾಣೆಯ ಪಿ.ಎಸ್.ಐ ಯಲ್ಲಪ್ಪ ಅವರು ದೂರು ಸ್ವೀಕರಿಸಿ ಪ್ರಥಮ ಹಂತದ ತನಿಖೆಯನ್ನು ನಿರ್ವಹಿಸಿ, ಮುಂದಿನ ತನಿಖೆಯನ್ನು ಕೊಪ್ಪಳ ಮಹಿಳಾ ಪೊಲೀಸ್ ಠಾಣೆಯ ಪಿಐ ಚಂದ್ರಪ್ಪ ಚಿಕ್ಕೋಡಿ ಅವರು ನಿರ್ವಹಿಸಿದ್ದು ತನಿಖೆಯಲ್ಲಿ ಆರೋಪಿತನ ಮೇಲಿನ ಆರೋಪಣೆಗಳು ಮೇಲ್ನೋಟಕ್ಕೆ ಸಾಭಿತಾಗಿದ್ದರಿಂದ ಆರೋಪಿತನ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಈ ಪ್ರಕರಣವು ಸ್ಪೇ.ಎಸ್‌ಸಿ(ಪೋಕ್ಸೊ) ಸಂ: 54/2022ರಲ್ಲಿ ದಾಖಲಾಗಿದ್ದು, ವಿಚಾರಣೆಯನ್ನು ನಡೆಸಿದ ನ್ಯಾಯಾಲಯ ಆರೋಪಿತನ ಮೇಲಿನ ಆರೋಪಣೆಗಳು ಸಾಭೀತಾಗಿವೆ ಎಂದು 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. 15,000 ಗಳ ದಂಡವನ್ನು ಭರಿಸುವಂತೆ ಆದೇಶಿಸಿ, ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ (ಪೋಕ್ಸೊ) ನ್ಯಾಯಾಧೀಶರಾದ ಕುಮಾರ ಡಿ.ಕೆ ರವರು 07-07-2025 ರಂದು ತೀರ್ಪು ಹೊರಡಿಸಿರುತ್ತಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಗೌರಮ್ಮ ದೇಸಾಯಿ ಅವರು ಈ ಪ್ರಕರಣ ನಡೆಸಿ ವಾದ ಮಂಡಿಸಿದ್ದರು. ಕೊಪ್ಪಳ ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರಕಾಶ ತಿಮ್ಮಾಪೂರ ಅವರು ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಹಾಜರಪಡಿಸುವಲ್ಲಿ ಸಾಕಷ್ಟು ಸಹಕರಿಸಿರುತ್ತಾರೆ ಎಂದು ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರ ಕಾರ್ಯಾಲಯ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande