ರಾಯಚೂರು, 09 ಜುಲೈ (ಹಿ.ಸ.) :
ಆ್ಯಂಕರ್ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2025-26 ನೇ ಸಾಲಿಗೆ ಎಸ್‍ಎಸ್‍ಪಿ ತಂತ್ರಾಂಶದ ಮುಖಾಂತರ ಪ್ರೀ-ಮೆಟ್ರಿಕ್ ಹಾಗೂ ಪೆÇೀಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ಎಸ್.ಎಸ್.ಪಿ. ವಿದ್ಯಾರ್ಥಿ ವೇತನ ಯೋಜನೆಯಡಿಯಲ್ಲಿ ಜಿಲ್ಲಾ ವ್ಯಾಪ್ತಿಯ ಶಾಲೆಗಳಲ್ಲಿ, ಕಾಲೇಜುಗಳಲ್ಲಿ, ಪದವಿ ಹಾಗೂ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಆಜಾದ ನಗರ, ರಾಯಚೂರು ಅವರ ವಿಕಲಚೇತನರ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ: 08532-200992ಗೆ ಅಥವಾ ಆಯಾ ತಾಲ್ಲೂಕಿನ ಗ್ರಾಮೀಣ ಮಟ್ಟದಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ನಗರ ಪ್ರದೇಶದಲ್ಲಿ ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ ತಾಲ್ಲೂಕು ಮಟ್ಟದಲ್ಲಿ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್