ಬೀದಿನಾಟಕ, ಜಾನಪದ ಸಂಗೀತ ಕಲಾ ತಂಡಗಳಿಂದ ಅರ್ಜಿ ಆಹ್ವಾನ
ರಾಯಚೂರು, 09 ಜುಲೈ (ಹಿ.ಸ.) : ಆ್ಯಂಕರ್ : ರಾಯಚೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರ್ಕಾರದ ಯೋಜನೆಗಳು, ಸಾಧನೆಗಳ ಕುರಿತು ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಬೀದಿನಾಟಕ, ಜಾನಪದ ಸಂಗೀತ ಕ
ಬೀದಿನಾಟಕ, ಜಾನಪದ ಸಂಗೀತ ಕಲಾ ತಂಡಗಳಿಂದ ಅರ್ಜಿ ಆಹ್ವಾನ


ರಾಯಚೂರು, 09 ಜುಲೈ (ಹಿ.ಸ.) :

ಆ್ಯಂಕರ್ : ರಾಯಚೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರ್ಕಾರದ ಯೋಜನೆಗಳು, ಸಾಧನೆಗಳ ಕುರಿತು ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಬೀದಿನಾಟಕ, ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಿಕೊಳ್ಳುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜುಲೈ 24 ಕೊನೆಯ ದಿನವಾಗಿದೆ.

ರಾಯಚೂರು ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಪ್ರತಿ ಬೀದಿನಾಟಕ ತಂಡದಲ್ಲಿ 8 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರಿರಬೇಕು.

ಪ್ರತಿ ಜಾನಪದ ಸಂಗೀತ ಕಲಾ ತಂಡದಲ್ಲಿ 3 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಒಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರಿರಬೇಕು. ಈ ಹಿಂದೆ ವಿವಿಧ ಇಲಾಖೆಗಳ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿರುವ ಅನುಭವ ಹೊಂದಿರಬೇಕು. ಬೀದಿನಾಟಕ ತಂಡವು ನೋಂದಾಯಿತ ತಂಡವಾಗಿರಬೇಕು.

ನಿಗದಿತ ಅರ್ಜಿ ನಮೂನೆಯನ್ನು ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, 1ನೇ ಮಹಡಿ, ಪತ್ರಿಕಾಭವನ, ರಂಗಮಂದಿರ ಹಿಂಭಾಗ, ರಾಯಚೂರು ಇವರಿಂದ ಉಚಿತವಾಗಿ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಜುಲೈ 24ರ ಒಳಗಾಗಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಈ ಕಚೇರಿಯ ಲಿಂಗರಾಜ್ ಮೊಬೈಲ್ ಸಂಖ್ಯೆ: 9743892080, ಎ.ಪ್ರಕಾಶ್ ಮೊಬೈಲ್ ಸಂಖ್ಯೆ: 9035063156ಗೆ ಸಂಪರ್ಕ ಮಾಡಬಹುದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಸುಲೈಮಾನ್ ನದಾಫ್ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande