ನವದೆಹಲಿ, 09 ಜುಲೈ (ಹಿ.ಸ.) :
ಆ್ಯಂಕರ್ : ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಯು ಇಂದು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ. ಸರ್ಕಾರದ ನೀತಿಗಳನ್ನು ವಿರೋಧಿಸಿ, ಭಾರತ್ ಬಂದ್ ಮತ್ತು ಪ್ರತಿಭಟನೆಗೆ ಕಾರ್ಮಿಕ ಸಂಘಟನೆಗಳು ಮುಂದಾಗಿವೆ. ಕಾರ್ಪೊರೇಟ್ ಪರ ಮತ್ತು ಕಾರ್ಮಿಕ ವಿರೋಧಿ ಕೇಂದ್ರ ಸರ್ಕಾರ ಎಂದು ಕಾರ್ಮಿಕ ಒಕ್ಕೂಟಗಳು ಆಕ್ರೋಶ ವ್ಯಕ್ತಪಡಿಸಿವೆ.
ಗ್ರಾಮೀಣ ಭಾರತದ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿದಂತೆ ಔಪಚಾರಿಕ ಮತ್ತು ಅನೌಪಚಾರಿಕ ವಲಯಗಳ 25 ಕೋಟಿಗೂ ಹೆಚ್ಚು ಕಾರ್ಮಿಕರು ಬಂದ್ ನಲ್ಲಿ ಭಾಗವಹಿಸಲಿದ್ದಾರೆ ಎಂದು ಅಂದಾಜಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa