ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ
ಕೊಪ್ಪಳ, 09 ಜುಲೈ (ಹಿ.ಸ.) : ಆ್ಯಂಕರ್ : ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ಫಲಾನುಭವಿಗಳ ನೋಂದಣಿಗಾಗಿ ವಿಶೇಷ ನೋಂದಣಿ ಅಭಿಯಾನ ಕೈಗೊಳ್ಳಲಾಗಿದೆ. ಈ ಸಂಬಂಧ 2023, 2024 ಹಾಗೂ 2025ನೇ ವರ್ಷದಲ್ಲಿ ಪದವಿ ಮತ್ತು ಡಿಪ್ಲೋಮಾ ತೇರ್ಗಡೆ ಹೊಂದಿದ ನಿರುದ್ಯೋಗಿ ಅ
ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ


ಕೊಪ್ಪಳ, 09 ಜುಲೈ (ಹಿ.ಸ.) :

ಆ್ಯಂಕರ್ : ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ಫಲಾನುಭವಿಗಳ ನೋಂದಣಿಗಾಗಿ ವಿಶೇಷ ನೋಂದಣಿ ಅಭಿಯಾನ ಕೈಗೊಳ್ಳಲಾಗಿದೆ.

ಈ ಸಂಬಂಧ 2023, 2024 ಹಾಗೂ 2025ನೇ ವರ್ಷದಲ್ಲಿ ಪದವಿ ಮತ್ತು ಡಿಪ್ಲೋಮಾ ತೇರ್ಗಡೆ ಹೊಂದಿದ ನಿರುದ್ಯೋಗಿ ಅಭ್ಯರ್ಥಿಗಳು ಯುವನಿಧಿ ಯೋಜನೆಯಡಿಯಲ್ಲಿ ನೋಂದಾಯಿಸಿಕೊಳ್ಳಲು ಸೇವಾಸಿಂಧು ಪೆÇೀರ್ಟಲ್ http://sevasindhugs.karnataka.gov.in ನಲ್ಲಿ ಆಗಸ್ಟ್ 7 ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಹಾಗೂ ಜಿಲ್ಲೆಯ ಎಲ್ಲಾ ವಿಶ್ವವಿದ್ಯಾಲಯಗಳು, ಸರಕಾರಿ ಮತ್ತು ಅನುದಾನಿತ ಪದವಿ ಹಾಗೂ ಡಿಪ್ಲೋಮಾ ಕಾಲೇಜುಗಳಲ್ಲಿ, ತಾಲ್ಲೂಕು ಕಛೇರಿಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಅರ್ಹ ಫಲಾನುಭವಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು.

ಪದವೀಧರರಿಗೆ ಪ್ರತಿ ತಿಂಗಳು ರೂ. 3000/- ಹಾಗೂ ಡಿಪ್ಲೋಮಾ ಪದವೀಧರರಿಗೆ ರೂ. 1500/- ನಿರುದ್ಯೋಗ ಭತ್ಯೆಯನ್ನು ನೀಡಲಾಗುತ್ತದೆ. ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿ, ಹೆಸರನ್ನು ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ನಂತರ ಮಾಹೆವಾರು ಯುವನಿಧಿ ಯೋಜನೆಯ ಪ್ರಯೋಜನವನ್ನು ಪಡೆಯಬೇಕಿದ್ದರೆ, ಸೇವಾಸಿಂಧು ಪೋರ್ಟಲ್‍ನಲ್ಲಿ ಪ್ರತಿ ತಿಂಗಳು 25ನೇ ದಿನಾಂಕದೊಳಗಾಗಿ ತಾನು ನಿರುದ್ಯೋಗಿಯೆಂದು, ಉನ್ನತ ವ್ಯಾಸಂಗ ಮುಂದುವರೆಸುತ್ತಿಲ್ಲವೆಂದು ಹಾಗೂ ಸ್ವಯಂ ಉದ್ಯೋಗವಿಲ್ಲವೆಂದು ಸ್ವಯಂ ಘೋಷಣೆ ಸಲ್ಲಿಸಬೇಕು. ಈ ಆಧಾರದ ಮೇಲೆ ಅಭ್ಯರ್ಥಿಗಳು ಮುಂದಿನ ಪಾವತಿಯನ್ನು ಸ್ವೀಕರಿಸಬಹುದಾಗಿರುತ್ತದೆ.

ಅಭ್ಯರ್ಥಿಗಳು ಕರ್ನಾಟಕ ಒನ್ ಅಥವಾ ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಆಧಾರ ಸೀಡೆಡ್ ಬ್ಯಾಂಕ್ ಖಾತೆ ಹಾಗೂ ಆಧಾರ್ ಲಿಂಕ್ಡ್ ಮೊಬೈಲ್ ನಂಬರನ್ನು ಹೊಂದಿರತಕ್ಕದ್ದು. ಅರ್ಜಿ ಸಲ್ಲಿಸಿದ ನಂತರ ಸೇವಾ ಸಿಂಧು ಪೋರ್ಟ್‍ಲ್‍ನಲ್ಲಿ ತಮ್ಮ ಅರ್ಜಿಯು ಯಾವ ಹಂತದಲ್ಲಿದೆ ಎಂಬುದನ್ನು ಪರಿಶೀಲಿಸಿಕೊಂಡು, ಒಂದು ವೇಳೆ ಅರ್ಜಿಯು ಅಪ್ರೂವಲ್ ಆಗದ ಸಂದರ್ಭದಲ್ಲಿ ಸೂಚಿಸಲ್ಪಟ್ಟ ಇಲಾಖೆಯ ಕಛೇರಿಗಳಿಗೆ ತಮ್ಮ ಎಲ್ಲಾ ಮೂಲ ಅಂಕಪಟ್ಟಿ ಹಾಗೂ ಇತರೆ ಪ್ರಮಾಣಪತ್ರಗಳೊಂದಿಗೆ ಖುದ್ದಾಗಿ ಭೇಟಿ ನೀಡಿ ಅಪ್ರೂವ್ ಮಾಡಿಸಿಕೊಳ್ಳಬೇಕಾಗಿರುತ್ತದೆ ಎಂದು ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande