ವಾಷಿಂಗ್ಟನ್, 09 ಜುಲೈ (ಹಿ.ಸ.) :
ಆ್ಯಂಕರ್ : ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ವಿರುದ್ಧ ತೀಕ್ಷ್ಣ ಟೀಕೆಗಳನ್ನು ಮಾಡಿದ್ದು, ರಷ್ಯಾ ವಿರುದ್ಧ ಹೊಸ ನಿರ್ಬಂಧಗಳ ಸೂಚನೆ ನೀಡಿದ್ದಾರೆ.
ಶ್ವೇತಭವನದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಮಾತನಾಡಿದ ಟ್ರಂಪ್, ಪುಟಿನ್ ಒಳ್ಳೆಯವರಾಗಿರಲು ಪ್ರಯತ್ನಿಸುತ್ತಾರೆ, ಆದರೆ ಅವರು ತಮ್ಮ ಸೈನಿಕರು ಮತ್ತು ಉಕ್ರೇನ್‌ನ ಜನರನ್ನು ಕೊಲ್ಲುತ್ತಿದ್ದಾರೆ ಎಂದು ಕಿಡಿಕಾರಿದರು.
ರಷ್ಯಾ ವಿರುದ್ಧ ಸೆನೆಟ್ ಮಂಡಿಸಿರುವ ಹೊಸ ನಿರ್ಬಂಧ ಮಸೂದೆಗೆ ಬೆಂಬಲ ನೀಡುವ ಬಗ್ಗೆ ಗಂಭೀರವಾಗಿ ಪರಿಗಣನೆ ಮಾಡುತ್ತಿದ್ದೇನೆ ಎಂದರೂ, ಸ್ಪಷ್ಟ ಯೋಜನೆಗಳನ್ನು ಬಹಿರಂಗಪಡಿಸಲು ನಿರಾಕರಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa