ಜನಜಾಗೃತಿ ಜಾಥಾಗೆ ಅಪರ ಜಿಲ್ಲಾಧಿಕಾರಿಗಳಿಂದ ಚಾಲನೆ
ವಿಜಯಪುರ, 01 ಆಗಸ್ಟ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲಾಡಳಿತ,ಜಿಲ್ಲಾ ಪಂಚಾಯತಿ,ಕರ್ನಾಟಕ ರಾಜ್ಯ‌ಮದ್ಯಪಾನ ಸಂಯಮ‌ ಮಂಡಳಿ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ,ಸಮಾಜ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕ
ಚಾಲನೆ


ವಿಜಯಪುರ, 01 ಆಗಸ್ಟ್ (ಹಿ.ಸ.) :

ಆ್ಯಂಕರ್ : ವಿಜಯಪುರ

ಜಿಲ್ಲಾಡಳಿತ,ಜಿಲ್ಲಾ ಪಂಚಾಯತಿ,ಕರ್ನಾಟಕ ರಾಜ್ಯ‌ಮದ್ಯಪಾನ ಸಂಯಮ‌ ಮಂಡಳಿ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ,ಸಮಾಜ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ,

ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನ‌ ಮುಕ್ತ ದಿನಾಚರಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಶ್ರೀ ಸಿದ್ಧೇಶ್ವರ ದೇವಸ್ಥಾನದ ಆವರಣದಿಂದ ಆರಂಭಗೊಂಡ ಜನ ಜಾಗೃತಿ ಜಾಥಾಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಜಾಗೃತಿ ಜಾಥಾವು ಗಾಂಧಿ ಚೌಕ,ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತ,ಕನಕದಾಸ ವೃತ್ತದ‌ ಮೂಲಕ‌ ಸಾಗಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ಸಮಾವೇಶಗೊಂಡಿತು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಸಂಪತ್ ಗುಣಾರಿ, ಸಮಾಜ‌ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಮಹೇಶ ಪೋತದಾರ,ಪಿಯು ಡಿಡಿ ಚಂದ್ರಶೇಖರ ಹೊಸಮನಿ,ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ,ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ನಾರಾಯಣಪ್ಪ ಕುರುಬರ, ಜಿಲ್ಲಾ ಎನ್ಐಸಿ ಅಧಿಕಾರಿ ಶಿವಾನಂದ ಗೂಗವಾಡ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ,

ವಿಜಯಪುರ ತಾಲೂಕಾ ಆರೋಗ್ಯಾಧಿಕಾರಿಗಳಾದ ಕೆ.ಡಿ ಗುಂಡಬಾವಡಿ,ಮನೋರೋಗ ತಜ್ಞರು ಡಾ.ಮಂಜುನಾಥ ಮಸಳಿ ಇದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande