ಜಮ್ಮು, 01 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕಾಶ್ಮೀರದಲ್ಲಿ ಭಾರಿ ಮಳೆಯ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ಆಗಸ್ಟ್ 3ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪಹಲ್ಗಾಮ್ ಮತ್ತು ಬಾಲ್ಟಾಲ್ ಮಾರ್ಗಗಳಲ್ಲಿ ದುರಸ್ತಿ ಮತ್ತು ನಿರ್ವಹಣಾ ಕಾರ್ಯಗಳು ನಡೆಯುತ್ತಿದ್ದು, ಯಾತ್ರಿಕರ ಸುರಕ್ಷತೆಯ ದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ.
ಜಮ್ಮುವಿನ ಭಗವತಿ ನಗರ ಶಿಬಿರದಿಂದ ಯಾತ್ರಾರ್ಥಿಗಳ ಸಂಚಾರ ನಿಲ್ಲಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ವಿಭಾಗೀಯ ಆಯುಕ್ತ ವಿಜಯ್ ಕುಮಾರ್ ಬಿಧುರಿ, “ಮಳೆಯ ನಂತರ ರಸ್ತೆ ಪರಿಸ್ಥಿತಿ ಅಸ್ಥಿರವಾಗಿದೆ. ಮುಂದಿನ ಸೂಚನೆಗಳವರೆಗೆ ಯಾತ್ರೆ ಸ್ಥಗಿತವಾಗಿರುತ್ತದೆ,” ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa