ಮುಖ್ಯಮಂತ್ರಿ ಸಿದ್ಧರಾಮಯ್ಯ ನವದೆಹಲಿ ಪ್ರವಾಸ
ಬೆಂಗಳೂರು, 01 ಆಗಸ್ಟ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ನವದೆಹಲಿಗೆ ತೆರಳಲಿದ್ದಾರೆ. ಇಂದು ಸಂಜೆ ನವದೆಹಲಿಯ ಐಟಿಸಿ ಮೌರ್ಯಾ ಹೋಟೆಲ್‌ನಲ್ಲಿ ನಡೆಯುವ “ಬ್ರಿಡ್ಜ್ ಟು ಬೆಂಗಳೂರು” ಸಂವಾದದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ನವದೆಹಲಿಯ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಲಿದ್ದ
Cm


ಬೆಂಗಳೂರು, 01 ಆಗಸ್ಟ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ನವದೆಹಲಿಗೆ ತೆರಳಲಿದ್ದಾರೆ.

ಇಂದು ಸಂಜೆ ನವದೆಹಲಿಯ ಐಟಿಸಿ ಮೌರ್ಯಾ ಹೋಟೆಲ್‌ನಲ್ಲಿ ನಡೆಯುವ “ಬ್ರಿಡ್ಜ್ ಟು ಬೆಂಗಳೂರು” ಸಂವಾದದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ನವದೆಹಲಿಯ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಆಗಸ್ಟ್ 2ರಂದು ಬೆಳಿಗ್ಗೆ 9:30ಕ್ಕೆ ವಿಜಯನ್ ಭವನದಲ್ಲಿ ನಡೆಯುವ ಎಐಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ಇಲಾಖೆಯ ವತಿಯಿಂದ ಆಯೋಜಿಸಲಾದ ವಾರ್ಷಿಕ ಕಾನೂನು ಸಮ್ಮೇಳನ - 2025ರಲ್ಲಿ ಭಾಗವಹಿಸಲಿದ್ದಾರೆ. ನಂತರ ಕೆಲ ಕೇಂದ್ರ ಸಚಿವರನ್ನು ಮುಖ್ಯಮಂತ್ರಿ ಭೇಟಿಯಾಗಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande