ಬಳ್ಳಾರಿ : ವಿಶೇಷ ಚೇತನ ಅತಿಥಿ ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹ
ಬಳ್ಳಾರಿ, 01 ಆಗಸ್ಟ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ವಿಶೇಷ ಚೇತನ ಅತಿಥಿ ಶಿಕ್ಷಕರ ಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತು ತುರ್ತು ಗಮನ ನೀಡಲು ಕೋರಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯು ಜಿಲ್ಲಾಡಳಿತದ ಮೂಲ
ಬಳ್ಳಾರಿ : ವಿಶೇಷ ಚೇತನ ಅತಿಥಿ ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹ


ಬಳ್ಳಾರಿ, 01 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ವಿಶೇಷ ಚೇತನ ಅತಿಥಿ ಶಿಕ್ಷಕರ ಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತು ತುರ್ತು ಗಮನ ನೀಡಲು ಕೋರಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯು ಜಿಲ್ಲಾಡಳಿತದ ಮೂಲಕ ಕರ್ನಾಟಕ ಸರ್ಕಾರಕ್ಕೆ ಶುಕ್ರವಾರ ಮನವಿ ಸಲ್ಲಿಸಿದೆ.

ಈ ಕುರಿತು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ (ಎಐಎಸ್‍ಇಸಿ)ಯ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಆರ್. ಸೋಮಶೇಖರಗೌಡ, ಅತಿಥಿ ಶಿಕ್ಷಕಿ (ವಿಶೇಷ ಚೇತನ) ನಾಗರತ್ನ ಎಸ್.ಜಿ. ಮತ್ತು ಜಿಲ್ಲಾ ಅಧ್ಯಕ್ಷ ಸುತ್ರಾಯ ಸುಧಾಕರ್ ಅವರು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಸರ್ಕಾರಿ ಪಾಥಮಿಕ ಮತ್ತು ಪೌಢಶಾಲೆಗಳ ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ವಿಶೇಷ ಚೇತನ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಬೇಕು. ಸೇವಾ ಹಿರಿತನವನ್ನು ಪರಿಗಣಿಸಿ ವಿಶೇಷ ಚೇತನ ಅಭ್ಯರ್ಥಿಗಳನ್ನು ಸೇವೆಯಲ್ಲಿ ಪ್ರತಿ ವರ್ಷವೂ ಸೇವೆಯಲ್ಲಿ ಮುಂದುವರಿಸ ಬೇಕು ಮತ್ತು ಈಗಿರುವ ಮೆರಿಟ್ ಪದ್ಧತಿಯನ್ನು ಕೈ ಬಿಡಬೇಕು. ವಿಶೇಷ ಚೇತನ ಅಭ್ಯರ್ಥಿಗಳಿಗೆ ಅವರು ನೆಲೆಸಿರುವ ಸ್ಥಳದ ಸುತ್ತಮುತ್ತಲು ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ನೇಮಕಾತಿ ಮಾಡಿಕೊಳ್ಳಬೇಕು. ಹತ್ತು ವರ್ಷಗಳಿಂದ ಹೆಚ್ಚು ಕಾಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸಿರುವ ವಿಶೇಷ ಚೇತನ ಅತಿಥಿ ಶಿಕ್ಷಕರನ್ನು ಸರ್ಕಾರ ಕಾಯಂ ಮಾಡಬೇಕು ಎಂದು ಮನವಿ ಸಲ್ಲಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande