ಧರ್ಮಸ್ಥಳ ಪ್ರಕರಣ : ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ-ಪರಮೇಶ್ವರ್ ಎಚ್ಚರಿಕೆ
ಬೆಂಗಳೂರು, 01 ಆಗಸ್ಟ್ (ಹಿ.ಸ.) : ಆ್ಯಂಕರ್ : ಧರ್ಮಸ್ಥಳ ಶವ ಹೂತ ಪ್ರಕರಣ ಸಂಬಂಧ ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಹಾಗೂ ಉಹಾಪೋಹದ ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು “ಪ್ರಚೋದನಕಾರಿ ವಿಷ
ಧರ್ಮಸ್ಥಳ ಪ್ರಕರಣ : ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ-ಪರಮೇಶ್ವರ್ ಎಚ್ಚರಿಕೆ


ಬೆಂಗಳೂರು, 01 ಆಗಸ್ಟ್ (ಹಿ.ಸ.) :

ಆ್ಯಂಕರ್ : ಧರ್ಮಸ್ಥಳ ಶವ ಹೂತ ಪ್ರಕರಣ ಸಂಬಂಧ ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಹಾಗೂ ಉಹಾಪೋಹದ ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು “ಪ್ರಚೋದನಕಾರಿ ವಿಷಯಗಳನ್ನು ಹಂಚಿಕೊಳ್ಳುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ದ್ವೇಷ ಭಾಷಣ ನಿಯಂತ್ರಣ ಕಾನೂನು ಜಾರಿಗೆ ಬಂದ ನಂತರ ದಕ್ಷಿಣ ಕನ್ನಡದಲ್ಲಿ ದ್ವೇಷ ಭಾಷಣದ ಪ್ರಮಾಣ ಕಡಿಮೆಯಾಗಿದೆ. “ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ತಾತ್ಸಾರ ಪೋಸ್ಟ್‌ ಮಾಡಿದರೂ ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ,” ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande