ನವದೆಹಲಿ, 01 ಆಗಸ್ಟ್ (ಹಿ.ಸ.) :
ಆ್ಯಂಕರ್ : ಲೋಕ ಸಭೆಯ ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗದ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಚುನಾವಣಾ ಆಯೋಗ ನೇರವಾಗಿ ಮತಗಲಕ್ಳತನ ಕಾರ್ಯದಲ್ಲಿ ಶಾಮೀಲಾಗಿದೆ ಇದು ದೇಶದ ವಿರುದ್ಧದ ಕೆಲಸವಾಗಿದೆ, ಎಂದು ಆರೋಪಿಸಿದ್ದಾರೆ.
ಸಂಸತ್ತ ಆವರಣದಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಕಾಂಗ್ರೆಸ್ ಈ ಸಂಬಂಧ ಆಂತರಿಕ ತನಿಖೆ ನಡೆಸಿದ್ದು, ಆರು ತಿಂಗಳ ತನಿಖೆಯಲ್ಲಿ ಅತ್ಯಂತ ಮಹತ್ವದ ಮಾಹಿತಿಯನ್ನು ಪತ್ತೆಹಚ್ಚಲಾಗಿದೆ. ಇದು ಪ್ರಕಟವಾದರೆ ಆಯೋಗದ ನಂಬಿಕೆ ಸಂಪೂರ್ಣವಾಗಿ ಕುಸಿಯಲಿದೆ ಎಂದಿದ್ದಾರೆ.
ಈ ಕುರಿತ ಪುರಾವೆಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa