ವಿಜಯಪುರ, 01 ಆಗಸ್ಟ್ (ಹಿ.ಸ.) :
ಆ್ಯಂಕರ್ : ನಾನಾ ಸಾಮಾಜಿಕ ಭದ್ರತೆ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಲು ಜಿಲ್ಲೆಯ ಹೋಬಳಿ ಮಟ್ಟದಲ್ಲಿ ಪಿಂಚಣಿ ಅದಾಲತ್ ನಡೆಸಲಾಗುತ್ತಿದ್ದು, ನಾಳೆ ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯ 13 ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ.
ವಿಜಯಪುರ ಉಪ ವಿಭಾಗಾಧಿಕಾರಿಗಳು ಆಕಳವಾಡಿಯ ಶ್ರೀ ಹನುಮಂತೇಶ್ವರ ದೇವಸ್ಥಾನದಲ್ಲಿ, ಇಂಡಿ ಉಪ ವಿಭಾಗಾಧಿಕಾರಿಗಳು ಆಲಹಳ್ಳಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ, ವಿಜಯಪುರ ಗ್ರೇಡ್-2 ತಹಶೀಲ್ದಾರ ಅವರು ಆಹೇರಿ (ಜ) ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಹಾಗೂ ತಿಕೋಟಾ ಗ್ರೇಡ್-2 ತಹಶೀಲ್ದಾರ ಅವರು ಹರನಾಳ ಗ್ರಾಮದ ಶ್ರೀ ಲಕ್ಷ್ಮೀ ದೇವಸ್ಥಾನದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಬಬಲೇಶ್ವರ ಗ್ರೇಡ್-2 ತಹಶೀಲ್ದಾರ ಅವರು ಕಾಖಂಡಕಿ ಗ್ರಾಮ ಚಾವಡಿಯಲ್ಲಿ, ಬಸವನಬಾಗೇವಾಡಿ ಗ್ರೇಡ್-2 ತಹಶೀಲ್ದಾರ ಅವರು ಬ್ಯಾಕೋಡ್ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ, ಕೊಲ್ಹಾರ ತಹಶೀಲ್ದಾರ ಹಿರೇಗರಸಂಗಿ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಹಾಗೂ ತಾಳಿಕೋಟೆ ಗ್ರೇಡ್-2 ತಹಶೀಲ್ದಾರ ಅವರು ತಾಳಿಕೋಟೆಯ ವಾರ್ಡ ನಂ.21ರ ಶ್ರೀ ಗ್ರಾಮದೇವತೆ ದೇವಸ್ಥಾನದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಮುದ್ದೇಬಿಹಾಳ ಗ್ರೇಡ್-2 ತಹಶೀಲ್ದಾರ ಅವರು ಗಂಗೂರ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ, ಇಂಡಿ ಗ್ರೇಡ್-2 ತಹಶೀಲ್ದಾರ ಅವರು ಸಾತಲಗಾಂವ ಶ್ರೀ ಅಮೋಘಸಿದ್ದೇಶ್ವರ ದೇವಸ್ಥಾನದಲ್ಲಿ, ಚಡಚಣ ಗ್ರೇಡ್-2 ತಹಶೀಲ್ದಾರ ಅವರು ಗೋಡಿಹಾಳ ಬಿಸಲ ಸಿದ್ದರಾಯನ ದೇವಸ್ಥಾನದಲ್ಲಿ, ಸಿಂದಗಿ ತಹಶೀಲ್ದಾರ ಅವರು ನಾಗಾವಿ ಕೆ.ಡಿ. ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಹಾಗೂ ದೇವರಹಿಪ್ಪರಗಿ ಗ್ರೇಡ್-2 ತಹಶೀಲ್ದಾರ ಅವರು ದೇವರೂರ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande