ಬೆಂಗಳೂರು, 01 ಆಗಸ್ಟ್ (ಹಿ.ಸ.) :
ಆ್ಯಂಕರ್ : ಧರ್ಮಸ್ಥಳ ಶವ ಹೂತಿರುವ ರಹಸ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಮುಖ್ಯಸ್ಥ ಹಾಗೂ ಆಂತರಿಕ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣಬ್ ಮೊಹಂತಿ ಅವರು ಕೇಂದ್ರ ಸೇವೆಗೆ ತೆರಳುವ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, “ಪ್ರಣಬ್ ಮೊಹಂತಿ ಕೇಂದ್ರ ಸೇವೆಗೆ ಅರ್ಹತೆ ಪಡೆದಿರುವ ಡಿಜಿಪಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯನ್ನು ಕೇಂದ್ರ ಸರ್ಕಾರ ದೇಶದ ಅನೇಕ ಐಪಿಎಸ್ ಅಧಿಕಾರಿಗಳ ಅನುಭವ, ಹಿರಿತನ, ಕಾರ್ಯಕ್ಷಮತೆ ಆಧಾರದ ಮೇಲೆ ಪ್ರಕಟಿಸುತ್ತದೆ. ಆದರೆ ಇದರಿಂದ ತಕ್ಷಣದ ವರ್ಗಾವಣೆ ಆಗುವುದಿಲ್ಲ,” ಎಂದು ಹೇಳಿದರು.
“ಕೇಂದ್ರ ಸರ್ಕಾರ ಮೊಹಂತಿ ಅವರನ್ನು ಕೇಂದ್ರ ಸೇವೆಗೆ ಕಳುಹಿಸಲು ಕೋರಿದರೆ, ಕಳುಹಿಸುವ ಆಯ್ಕೆಯು ರಾಜ್ಯ ಸರ್ಕಾರದ ಹತ್ತಿರವಿದೆ. ಆದ್ದರಿಂದ ಅವರೇ ಹೋಗುತ್ತಿದ್ದಾರೆ ಎನ್ನುವುದು ಸುಳ್ಳು ಸುದ್ದಿಯಾಗಿದೆ,” ಎಂದು ಪರಮೇಶ್ವರ್ ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa