ವಿಜಯಪುರ, 01 ಆಗಸ್ಟ್ (ಹಿ.ಸ.) :
ಆ್ಯಂಕರ್ : ಒಳ ಮೀಸಲಾತಿ ಜಾರಿಗೆ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಮಾದಿಗರ ಸಂಘಟನೆಯ ಒಕ್ಕೂಟದಿಂದ ವಿಜಯಪುರ ನಗರದ ಡಾ.ಬಿ.ಆರ್. ಅಂಬೇಡ್ಕರ್ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೂ ಪ್ರತಿಭಟನೆ ನಡೆಯಿತು.
ನಿವೃತ್ತ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ಹಾಗೂ ಜೆ.ಸಿ. ಮಾಧುಸ್ವಾಮಿ ವರದಿ ಪರಿಗಣಿಸಿ ಪರಿಶಿಷ್ಟ ಒಳ ಮೀಸಲಾತಿಯನ್ನು ಆಗಷ್ಟ್ 15ರ ಒಳಗೆ ಸರ್ಕಾರ ಜಾರಿಗೆ ಮಾಡಬೇಕು. ಇಲ್ಲದೇ ಹೋದ್ರೇ ಮುಂಬರುವ ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ, ಗ್ರಾಮ ಪಂಚಾಯತ ಚುನಾವಣೆಯಲ್ಲಿ ಸರ್ಕಾರಕ್ಕೆ ತಕ್ಕಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಅಲ್ಲದೇ, ಈ ಸಂದರ್ಭದಲ್ಲಿ ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande