ಶಿಷ್ಠಾಚಾರ ಉಲ್ಲಂಘನೆಯಾಗದಂತೆ ಕಾರ್ಯಕ್ರಮಕ್ಕೆ ಶಿಸ್ತುಬದ್ಧ ಸಿದ್ಧತೆ
ರಾಯಚೂರು, 01 ಆಗಸ್ಟ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಕಂಪನಿ ಆವರಣಕ್ಕೆ ಆಗಮಿಸಿ ಶಂಕುಸ್ಥಾಪನೆ ಮಾಡಲಿರುವ ಕಾರ್ಯಕ್ರಮವು ಲೋಪದೋಷಗಳು ಆಗದಂತೆ ಶಿಷ್ಠಾಚಾರದಂತೆ ನಡೆಯಲು ಜಾಗೃತೆ ವಹಿಸಿ ಸಿದ್ಧತೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು
ಶಿಷ್ಠಾಚಾರ ಉಲ್ಲಂಘನೆಯಾಗದಂತೆ ಕಾರ್ಯಕ್ರಮಕ್ಕೆ ಶಿಸ್ತುಬದ್ಧ ಸಿದ್ಧತೆಯಾಗಲಿ


ರಾಯಚೂರು, 01 ಆಗಸ್ಟ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಕಂಪನಿ ಆವರಣಕ್ಕೆ ಆಗಮಿಸಿ ಶಂಕುಸ್ಥಾಪನೆ ಮಾಡಲಿರುವ ಕಾರ್ಯಕ್ರಮವು ಲೋಪದೋಷಗಳು ಆಗದಂತೆ ಶಿಷ್ಠಾಚಾರದಂತೆ ನಡೆಯಲು ಜಾಗೃತೆ ವಹಿಸಿ ಸಿದ್ಧತೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಹಟ್ಟಿ ಚಿನ್ನದ ಗಣಿ ಕಂಪನಿಯ ಅಧಿಕಾರಿಗಳಿಗೆ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶುಕ್ರವಾರ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಕಂಪನಿಯ ಆಡಳಿತ ಕಚೇರಿಯ ಸಭಾಂಗಣದಲ್ಲಿ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಅವರು ಮಾತನಾಡಿದರು.

ಕಾರ್ಯಕ್ರಮಕ್ಕೆ ಆಗಮಿಸುವ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಸಚಿವರು, ಶಾಸಕರು, ನಿಗಮ, ಸಮಿತಿ, ಪ್ರಾಧಿಕಾರದ ಅಧ್ಯಕ್ಷರು, ಹಿರಿಯ ಮುಖಂಡರು, ಗಣ್ಯರು, ಹಿರಿಯ ಅಧಿಕಾರಿಗಳು ಮತ್ತು ಇನ್ನೀತರರಿಗೆ ಶಿμÁ್ಟಚಾರದಂತೆ ಆಸನದ ವ್ಯವಸ್ಥೆಯಾಗಬೇಕು.

ಸಮಾರಂಭದಲ್ಲಿ ಗೊಂದಲಕ್ಕೆ ಅವಕಾಶವಿಲ್ಲದಂತೆ ಸ್ವಾಗತ ಭಾಷಣ, ಸನ್ಮಾನ, ಸ್ಮರಣಿಕೆ ವಿತರಣೆ, ಸೌಲಭ್ಯಗಳ ವಿತರಣೆ ಎಲ್ಲವೂ ಅಚ್ಚುಕಟ್ಡಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಕಂಪನಿಯ ಅಧಿಕಾರಿಗಳು ಮುಂಚಿತವಾಗಿ ಕಾರ್ಯಕ್ರಮದ ವಿವರದ ಪಟ್ಟಿ ತಯಾರಿಸಿ ಅದಕ್ಕೆ ಸಿದ್ದತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಕಾರ್ಯಕ್ರಮಕ್ಕೆ ಹಟ್ಟಿ ಚಿನ್ನದ ಗಣಿ ಕಂಪನಿಯ ಅಧಿಕಾರಿಗಳು, ಸಿಬ್ಬಂದಿ, ಕಂಪನಿಯ ಕಾರ್ಮಿಕರು, ಕಾರ್ಮಿಕರ ಕುಟುಂಬ ವರ್ಗದವರು ಸೇರಿದಂತೆ ಹಟ್ಟಿ, ಲಿಂಗಸಗೂರು, ಸಿರವಾರ ಸೇರಿದಂತೆ ಬೇರೆ ಬೇರೆ ಕಡೆಯಿಂದ ಆಗಮಿಸುವ ಸಾರ್ವಜನಿಕರಿಗೆ ಸರಿಯಾದ ರೀತಿಯಲ್ಲಿ ಊಟ ಉಪಹಾರ ಸಿದ್ಧತಾ ಕಾರ್ಯವನ್ನು ಈಗಿನಿಂದಲೇ ಆರಂಭಿಸಬೇಕು. ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳ ವ್ಯವಸ್ಥೆಗೆ ಏರ್ಪಾಡು ಮಾಡಬೇಕು ಎಂದು ಸೂಚನೆ ನೀಡಿದರು.

ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಬ್ಯಾನರ್ಸ್, ಹೋರ್ಡಿಂಗ್ಸ್, ಬ್ಯಾಡ್ಜ್ ಮುದ್ರಣ ಕಾರ್ಯ ಆಗಬೇಕು. ಜನಪ್ರತಿನಿಧಿಗಳಿಗೆ, ಗಣ್ಯರಿಗೆ, ಮಾಧ್ಯಮ ಪ್ರತಿನಿಧಿಗಳಿಗೆ, ಅಧಿಕಾರಿಗಳು, ಸಿಬ್ಬಂದಿ, ಕಂಪನಿಯ ಕಾರ್ಮಿಕರು, ಸ್ವಯಂ ಸೇವಕರು ಹಾಗೂ ಇನ್ನೀತರರಿಗೆ ಪ್ರತ್ಯೇಕವಾಗಿ ಪಾಸುಗಳನ್ನು ವಿತರಿಸಿ ಕಾರ್ಯಕ್ರಮದಲ್ಲಿ ಅಚ್ಚುಕಟ್ಟುತನ ಕಾಯ್ದುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಬಗ್ಗೆ ವ್ಯಾಪಕ ಪ್ರಚಾರ ಮಾಡಬೇಕು. ಆಹಾರ ಸಿದ್ಧತೆ, ವಿತರಣೆಯಲ್ಲಿ ಯಾವುದೇ ರೀತಿಯ ಲೋಪಗಳು ಆಗದಂತೆ ಆಹಾರ ಪರೀಕ್ಷೆ ಮತ್ತು ಕುಡಿಯುವ ನೀರಿನ ಪರೀಕ್ಷೆಗೆ ಆಹಾರ ಇಲಾಖೆಯ ಅಧಿಕಾರಿಗಳು ಮುತುವರ್ಜಿ ವಹಿಸಬೇಕು. ಕಾರ್ಯಕ್ರಮದ ಸ್ಥಳದಲ್ಲಿ ಅಂಬ್ಯುಲೆನ್ಸ್, ಅಗತ್ಯ ಸಂಖ್ಯೆಯಲ್ಲಿ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಇರುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ನೋಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದರಿಂದ ಜನಸಂದಣಿಯ ನಿಯಂತ್ರಣಕ್ಕೆ ಚಿನ್ನದ ಗಣಿ ಕಂಪನಿಯ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆಯು ಈಗಿನಿಂದಲೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸಾರ್ವಜನಿಕರು, ಗಣ್ಯರು, ಜನಪ್ರತಿನಿಧಿಗಳು ಸರಳವಾಗಿ ಬಂದು ಹೋಗಲು ಪ್ರತ್ಯೇಕ ಮಾರ್ಗದ ವ್ಯವಸ್ಥೆಗೆ ಅಗತ್ಯ ಸಂಖ್ಯೆಯಲ್ಲಿ ಬ್ಯಾರಿಕೇಡ್ ಅಳವಡಿಸಲು ಸಿದ್ಧತೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳು, ಗಣಿ ಕಂಪನಿಯ ಅಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಲಿಂಗಸ್ಗೂರು ಸಹಾಯಕ ಆಯುಕ್ತರಾದ ಬಸವಣ್ಣೆಪ್ಪ ಕಲಶೆಟ್ಟಿ, ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ್, ಲಿಂಗಸೂಗೂರು ತಹಶೀಲ್ದಾರ್ ಕೆ.ಸತ್ಯವಂತಿ, ಕಂಪನಿಯ ಕಾರ್ಯನಿರ್ವಾಹಕ ನಿರ್ದೇಶಕರಾದ ಪ್ರಕಾಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಕಂಪನಿಯ ವಿವಿಧ ವಿಭಾಗದ ಅಧಿಕಾರಿಗಳು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande