ವಿಜಯಪುರ, 01 ಆಗಸ್ಟ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಎತ್ತಿನಬಂಡಿ ಓಟ ಕ್ರೀಡೆಯನ್ನು ಆಯೋಜಿಸಲಾಗುತ್ತಿದ್ದು, ಎತ್ತಿನಬಂಡಿ ಓಟ ಕ್ರೀಡೆಯಲ್ಲಿ ಆಸಕ್ತ ಹೊಂದಿರುವ ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಎತ್ತಿನಬಂಡೆ ಕ್ರೀಡೆಗೆ ಪ್ರೋತ್ಸಾಹ ಮತ್ತು ಉತ್ತೇಜನ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿರುತ್ತಾರೆ. ಎತ್ತಿನ ಬಂಡೆ ಕ್ರೀಡೆಗೆ ಪ್ರೊತ್ಸಾಹ ಹಾಗೂ ಉತ್ತೇಜನ ನೀಡಲು ರಾಜ್ಯದ ನಾನಾ ಜಿಲ್ಲೆಗಳಲ್ಲಿ ಆಯೋಜಿಸುವ 15 ಸಂಘ-ಸಂಸ್ಥೆಗಳಿಗೆ ತಲಾ 2 ಲಕ್ಷ ರೂ.ಗಳನ್ನು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆಯ್ಕೆ ಮಾಢುವ ಸಂಘ-ಸಂಸ್ಥೆಗಳಿಗೆ ಅನುದಾನ ಒದಗಿಸಲಾಗುತ್ತದೆ.
ಜಿಲ್ಲೆಯಲ್ಲಿಯು ಸಹ ಜಿಲ್ಲಾಧಿಕಾರಿಗಳ ಮೂಲಕ ಸಂಘ-ಸಂಸ್ಥೆಗಳನ್ನು ಆಯ್ಕೆ ಮಾಡಲು ಆಸಕ್ತ ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ದಿನಾಂಕ : 5-8-2025ರೊಳಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯಪುರ ಕಚೇರಿಗೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ; 08352-251085 ಸಂಖ್ಯೆಗೆ ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande