ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ
ಗದಗ, 01 ಆಗಸ್ಟ್ (ಹಿ.ಸ.) : ಆ್ಯಂಕರ್ : ಒಳಮೀಸಲಾತಿ ಜಾರಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಾದಿಗ ಸಂಘಟನೆಗಳ ಒಕ್ಕೂಟದಿಂದ ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಭಾರಿ ಪ್ರತಿಭಟನೆ ನಡೆಯಿತು. ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿಯೊಳಗಿನ 101 ಸಮುದಾಯಗಳಿಗೆ ಒಳಮೀಸಲಾತ
ಪೋಟೋ


ಗದಗ, 01 ಆಗಸ್ಟ್ (ಹಿ.ಸ.) :

ಆ್ಯಂಕರ್ : ಒಳಮೀಸಲಾತಿ ಜಾರಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಾದಿಗ ಸಂಘಟನೆಗಳ ಒಕ್ಕೂಟದಿಂದ ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಭಾರಿ ಪ್ರತಿಭಟನೆ ನಡೆಯಿತು. ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿಯೊಳಗಿನ 101 ಸಮುದಾಯಗಳಿಗೆ ಒಳಮೀಸಲಾತಿ ನೀಡಬೇಕೆಂದು ಒತ್ತಾಯಿಸಿದ ಪ್ರತಿಭಟನಾಕಾರರು, ಕಿತ್ತೂರು ರಾಣಿ ಚೆನ್ನಮ್ಮ ಸರ್ಕಲ್ ದಿಂದ ಡಿಸಿ ಕಚೇರಿವರೆಗೆ ಜನಾಕ್ರೋಶ ಯಾತ್ರೆ ನಡೆಸಿದರು.

35 ವರ್ಷಗಳಿಂದ ನನೆಗುದಿಗೆ ಬಿದ್ದ ಈ ಹೋರಾಟಕ್ಕೆ ನ್ಯಾಯ ದೊರಕಬೇಕೆಂದು ಒತ್ತಾಯಿಸಿದ ಕಾರ್ಯಕರ್ತರು, ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಸಿಎಂ ಸಿದ್ಧರಾಮಯ್ಯ ಈ ಬಗ್ಗೆ ತಕ್ಷಣ ತೀರ್ಮಾನ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಸರ್ಕಾರ ಎಮ್ಮೆ ರೀತಿ ನಿಂತಿದ್ದು, ಇದನ್ನ ಬಡಿದು ಎಬ್ಬಿಸಬೇಕಿದೆ, ಇಲ್ಲದಿದ್ದರೆ ಉಗ್ರ ಹೋರಾಟ ಕೈಗೆತ್ತಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande