ರಾಹುಲ್ ಗಾಂಧಿ ಹೇಳಿಕೆ ಆಧಾರ ರಹಿತ : ಚುನಾವಣಾ ಆಯೋಗ
ನವದೆಹಲಿ, 01 ಆಗಸ್ಟ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತಗಳ್ಳತನ ಆರೋಪಮಾಡಿದ ಬೆನ್ನಲ್ಲೇ ಚುನಾವಣಾ ಆಯೋಗ ಪ್ರತಿಕ್ರಿಯೆ ನೀಡಿದ್ದು, ಅವರು ಮಾಡಿದ ಆರೋಪ ಆಧಾರ ರಹಿತ ಎಂದು ಹೇಳಿದೆ. ರಾಹುಲ್ ಗಾಂಧಿ ಹೇಳಿದರು ಚುನಾವಣಾ ಆಯೋಗ ದೇಶದ ವಿರುದ್ಧ ಕೆಲಸ ಮಾಡುತ್ತಿದೆ ಎಂದು ಗಂಭೀರ ಆರ
Election


ನವದೆಹಲಿ, 01 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತಗಳ್ಳತನ ಆರೋಪಮಾಡಿದ ಬೆನ್ನಲ್ಲೇ ಚುನಾವಣಾ ಆಯೋಗ ಪ್ರತಿಕ್ರಿಯೆ ನೀಡಿದ್ದು, ಅವರು ಮಾಡಿದ ಆರೋಪ ಆಧಾರ ರಹಿತ ಎಂದು ಹೇಳಿದೆ.

ರಾಹುಲ್ ಗಾಂಧಿ ಹೇಳಿದರು ಚುನಾವಣಾ ಆಯೋಗ ದೇಶದ ವಿರುದ್ಧ ಕೆಲಸ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದು, ಈ ಹೇಳಿಕೆಯು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಚುನಾವಣಾ ಆಯೋಗದ ವಕ್ತಾರರು, ಪ್ರತಿದಿನ ಇಂತಹ ಆಧಾರ ರಹಿತ ಆರೋಪಗಳನ್ನು ಮಾಡಲಾಗುತ್ತಿದೆ. ಆಯೋಗವು ನ್ಯಾಯಸಮ್ಮತ, ಪಾರದರ್ಶಕವಾಗಿ ಕೆಲಸ ಮಾಡುತ್ತಿದೆ. ಇಂತಹ ಬೇಜವಾಬ್ದಾರಿ ಹೇಳಿಕೆಗಳಿಗೆ ಯಾವುದೇ ಮಹತ್ವ ನೀಡಬಾರದು ಎಂದು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande