ಕೊಪ್ಪಳ, 01 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ಜಿಲ್ಲಾ ಪಂಚಾಯತ್ ನೂತನ ಉಪ ಕಾರ್ಯದರ್ಶಿಯಾಗಿ ಟಿ.ಕೃಷ್ಣಮೂರ್ತಿ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ಕೊಪ್ಪಳ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಅವರು ಧಾರವಾಡ ಜಿಲ್ಲೆಗೆ ವರ್ಗಾವಣೆಗೊಂಡ ಹಿನ್ನೆಲೆ ಈ ಸ್ಥಾನಕ್ಕೆ ಟಿ.ಕೃಷ್ಣಮೂರ್ತಿ ಅವರನ್ನು ಸರ್ಕಾರದ ನೇಮಿಸಿದೆ.
ಟಿ.ಕೃಷ್ಣಮೂರ್ತಿ ಅವರು ವಿಜಯಪುರ ಜಿಲ್ಲೆಯ ಸಹಕಾರ ಇಲಾಖೆಯಲ್ಲಿ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರು ಈ ಹಿಂದೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ಮತ್ತು ಕೊಪ್ಪಳ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಹಾಗೂ ಕೊಪ್ಪಳ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಅನುಭವವನ್ನು ಹೊಂದಿದ್ದಾರೆ.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ, ಯೋಜನಾ ನಿರ್ದೇಶಕ ಪ್ರಕಾಶ ವಿ. ಸೇರಿದಂತೆ ಜಿಲ್ಲಾ ಪಂಚಾಯತ್ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್