ಅಂಗನವಾಡಿ ಕಾರ್ಯಕರ್ತೆ ಹುದ್ದೆ : ಆಕ್ಷೇಪಣೆಗೆ ಆಹ್ವಾನ
ಹಾಸನ, 10 ಆಗಸ್ಟ್ (ಹಿ.ಸ.) : ಆ್ಯಂಕರ್ : ಹಾಸನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ 20 ಅಂಗನವಾಡಿ ಕಾರ್ಯಕರ್ತೆ ಮತ್ತು 93 ಸಹಾಯಕಿಯರ ಹುದ್ದೆಖಾಲಿ ಇದ್ದು ಇವುಗಳ ಆಯ್ಕೆ ಸಂಬಂಧ 11-03-2025 ರಿಂದ 09-04-2025 ರವರೆಗೂ ಕೊನೆ ದಿನಾಂಕ ನಿಗಧಿಪಡಿಸಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು
ಅಂಗನವಾಡಿ ಕಾರ್ಯಕರ್ತೆ ಹುದ್ದೆ : ಆಕ್ಷೇಪಣೆಗೆ ಆಹ್ವಾನ


ಹಾಸನ, 10 ಆಗಸ್ಟ್ (ಹಿ.ಸ.) :

ಆ್ಯಂಕರ್ : ಹಾಸನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ 20 ಅಂಗನವಾಡಿ ಕಾರ್ಯಕರ್ತೆ ಮತ್ತು 93 ಸಹಾಯಕಿಯರ ಹುದ್ದೆಖಾಲಿ ಇದ್ದು ಇವುಗಳ ಆಯ್ಕೆ ಸಂಬಂಧ 11-03-2025 ರಿಂದ 09-04-2025 ರವರೆಗೂ ಕೊನೆ ದಿನಾಂಕ ನಿಗಧಿಪಡಿಸಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿರುತ್ತದೆ.

ಸ್ವೀಕೃತಗೊಂಡ ಅರ್ಜಿಗಳನ್ನು ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಪರಿಶೀಲಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ತಾತ್ಕಾಲಿಕ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನೆ ಹಾಸನ ಕಚೇರಿಯಲ್ಲಿ ಪ್ರಕಟಿಸಲಾಗಿರುತ್ತದೆ.

ಸಾರ್ವಜನಿಕರು ಆಕ್ಷೇಪಣೆಗಳಿದ್ದಲ್ಲಿ ಆ.14 ಸಮಯ ಸಂಜೆ 5.30 ರ ಒಳಗೆ ಶಿಶು ಅಭಿವೃದ್ಧಿ ಯೋಜನೆ ಹಾಸನ ಈ ಕಚೇರಿಗೆ ಆಕ್ಷೇಪಣೆ ಕುರಿತು ಪೂರಕ ದಾಖಲಾತಿಗಳೊಂದಿಗೆ ನೇರವಾಗಿ ಸಲ್ಲಿಸಬಹುದಾಗಿರುತ್ತದೆ. ಸದರಿ ದಿನಾಂಕದ ನಂತರ ಬಂದ ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಹಾಸನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande