ಬೆಂಗಳೂರು, 10 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ನಮ್ಮ ಮೆಟ್ರೋ ಹಂತ–2ರ ಹಳದಿ ಮಾರ್ಗಕ್ಕೆ ಚಾಲನೆ, ಹಂತ–3ರ ಶಂಕುಸ್ಥಾಪನೆ ಹಾಗೂ ಮೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಉದ್ಘಾಟನೆ ಸೇರಿದಂತೆ ನಾನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕರ್ನಾಟಕದ ಪ್ರವಾಸ ಮುಗಿಸಿ ದೆಹಲಿಗೆ ವಾಪಸಾದರು.
ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಿದ ಪ್ರಧಾನ ಮಂತ್ರಿಗಳನ್ನು ಸುರಿಯುವ ಮಳೆಯ ಮಧ್ಯೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.ಎ. ಸಲೀಂ, ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆತ್ಮೀಯವಾಗಿ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ಹಲವು ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa