ಎನ್‌ಡಿಎ ಮೈತ್ರಿಕೂಟದ ಸಮನ್ವಯ ಸಮಿತಿ ಸಭೆ
ಬೆಂಗಳೂರು, 10 ಆಗಸ್ಟ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನಲ್ಲಿ ಎನ್‌ಡಿಎ ಮೈತ್ರಿಕೂಟದ ಸಮನ್ವಯ ಸಭೆ ನಡೆಯಿತು. ವಿಧಾನ ಸಭೆ ಅಧಿವೇಶನ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ, ಅಧಿವೇಶನದಲ್ಲಿ ಸರ್ಕಾರದ ಆಡಳಿತ ವೈಫಲ್ಯ ಹಾಗೂ ದುರಾಡಳಿತದ ವಿರುದ್ಧ ಸಂಘಟಿತ ಹೋರಾಟ ನಡೆಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು
Meeting


ಬೆಂಗಳೂರು, 10 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನಲ್ಲಿ ಎನ್‌ಡಿಎ ಮೈತ್ರಿಕೂಟದ ಸಮನ್ವಯ ಸಭೆ ನಡೆಯಿತು. ವಿಧಾನ ಸಭೆ ಅಧಿವೇಶನ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ, ಅಧಿವೇಶನದಲ್ಲಿ ಸರ್ಕಾರದ ಆಡಳಿತ ವೈಫಲ್ಯ ಹಾಗೂ ದುರಾಡಳಿತದ ವಿರುದ್ಧ ಸಂಘಟಿತ ಹೋರಾಟ ನಡೆಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.

ಸಭೆಯಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ಉಪ ನಾಯಕ ಅರವಿಂದ್ ಬೆಲ್ಲದ, ವಿಧಾನ ಪರಿಷತ್ ವಿಪಕ್ಷ ನಾಯಕ ಚಾಲವಾದಿ ನಾರಾಯಣಸ್ವಾಮಿ, ಮಾಜಿ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವರಾದ ಅರಗ ಜ್ಞಾನೇಂದ್ರ, ಸಿ.ಟಿ. ರವಿ, ಸಿ.ಸಿ. ಪಾಟೀಲ, ಸುನಿಲ್ ಕುಮಾರ್ ಕಾರ್ಕಳ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿ ಕುಮಾರ್, ಶಾಸಕರಾದ ಎಂ.ಟಿ. ಕೃಷ್ಣಪ್ಪ, ಶಾರದಾ ನಾಯ್ಕ್, ಜವರಾಯಿಗೌಡ, ಎ. ಮಂಜು, ಜಿ.ಡಿ. ಹರೀಶ್ ಗೌಡ, ಮಾಜಿ ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ ಹಾಗೂ ಬಿಜೆಪಿ–ಜೆಡಿಎಸ್ ಪಕ್ಷಗಳ ಅನೇಕ ಪ್ರಮುಖರು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande