ಬೆಂಗಳೂರು, 10 ಆಗಸ್ಟ್ (ಹಿ.ಸ.) :
ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಬೆಂಗಳೂರಿನ ಕೆಎಸ್ಆರ್ ರೈಲು ನಿಲ್ದಾಣದಲ್ಲಿ ಬೆಂಗಳೂರು-ಬೆಳಗಾವಿ ನೂತನ ʼವಂದೇ ಭಾರತ್ʼ ರೈಲು ಸಂಚಾರ ಸೇರಿದಂತೆ ಮೂರು ವಂದೇ ಭಾರತ್ ರೈಲು ಸಂಚಾರಕ್ಕೆ ಚಾಲನೆ ನೀಡಿದರು.
ವರ್ಚುವಲ್ ಮೂಲಕ ನಾಗ್ಪುರದ ಅಜ್ನಿ-ಪೂನಾ ಹಾಗೂ ಅಮೃತಸರ-ಶ್ರೀ ಮಾತಾ ವೈಷ್ಣವೋದೇವಿ ಕಾರ್ತ ಮಧ್ಯೆ ನೂತನ ವಂದೇ ಭಾರತ್ ರೈಲುಗಳು ಹಸಿರು ನಿಶಾನೆ ತೋರಿದರು.
ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ಜೊತೆ ಪ್ರಧಾನಮಂತ್ರಿ ಮಾತುಕತೆ ನಡೆಸಿದರು.
ನಂತರ ಬೆಂಗಳೂರು ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ ನೀಡಲು ಕೆಎಸ್ಆರ್ ರೈಲು ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ರಾಗಿಗುಡ್ಡ ಮೆಟ್ರೋ ನಿಲ್ದಾಣಕ್ಕೆ ತೆರಳಿ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ ನೀಡಿ 19.15 ಕಿಲೋಮೀಟರ್ ಉದ್ದ, 16 ನಿಲ್ದಾಣಗಳನ್ನು ಹೊಂದಿದ, ₹5,056.99 ಕೋಟಿ ವೆಚ್ಚದಲ್ಲಿ ನಿರ್ಮಿತ ಈ ಮಾರ್ಗದಲ್ಲಿ ಪ್ರಧಾನಿ ಸ್ವತಃ ಎಲೆಕ್ಟ್ರಾನಿಕ್ಸ್ ಸಿಟಿವರೆಗೆ ಮೆಟ್ರೋದಲ್ಲಿ ಪ್ರಯಾಣಿಸಿದ್ದು ಪ್ರಯಾಣದ ವೇಳೆ ಮೆಟ್ರೋ ದಲ್ಲಿ ಸಂಚರಿಸುತ್ತಿದ್ದ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು.
ರಾಗಿಗುಡ್ಡ ಮೆಟ್ರೋ ನಿಲ್ದಾಣಕ್ಕೆ ತೆರಳುವ ಮಾರ್ಗದಲ್ಲಿ ಸಾರ್ವಜನಿಕರು, ಬಿಜೆಪಿ ಕಾರ್ಯಕರ್ತರು ಪ್ರಧಾನಿ ವಾಹನಕ್ಕೆ ಪುಷ್ಪವೃಷ್ಠಿ ಮೂಲಕ ಸ್ವಾಗತಿಸಿದರು.
ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಳದಿ ನಿಲ್ದಾಣದ ಕುರಿತು ಪ್ರಧಾನಮಂತ್ರಿಗಳಿಗೆ ಮಾಹಿತಿ ನೀಡಿದರು.
ಈ ವೇಳೆ ಪ್ರಧಾನಮಂತ್ರಿ ಮೋದಿ ಮೆಟ್ರೋ ನಿಲ್ದಾಣದಲ್ಲಿ ಸ್ವತಃ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಟಿಕೆಟ್ ಪಡೆದಿದ್ದು ಕಂಡು ಬಂದಿತು.
ಪ್ರಧಾನಮಂತ್ರಿ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವರು,ಸಂಸದರು, ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa