ಬೆಂಗಳೂರು, 10 ಆಗಸ್ಟ್ (ಹಿ.ಸ.) :
ಆ್ಯಂಕರ್ : ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 2.30ರವರೆಗೆ ಬೆಂಗಳೂರಿನ ನೈಸ್ ರಸ್ತೆಯಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ವಾಹನ ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ವಾಹನ ಸವಾರರು ಬನ್ನೇರುಘಟ್ಟ ರಸ್ತೆ ಮೂಲಕ ಪರ್ಯಾಯ ಮಾರ್ಗ ಬಳಸುವಂತೆ ಪೋಲಿಸರು ಸೂಚಿಸಿದ್ದಾರೆ.
ಇದೇ ವೇಳೆ ಬಿಎಂಆರ್‌ಸಿಎಲ್ ಪ್ರಕಟಣೆ ಹೊರಡಿಸಿದ್ದು ಪ್ರಧಾನಮಂತ್ರಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಲಾಲ್‌ಬಾಗ್, ಸೌತ್ ಎಂಡ್ ಸರ್ಕಲ್, ಜಯನಗರ, ಆರ್.ವಿ. ರಸ್ತೆ ಮೆಟ್ರೋ ನಿಲ್ದಾಣಗಳು ಮುಚ್ಚಿರಲಿವೆ ಎಂದು ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa